ಗುಂಡ್ಲುಪೇಟೆ: ಮಹಿಳೆಯರು ತಾಳ್ಮೆಯಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ಸೌಲಭ್ಯ ಪಡೆದುಕೊಳ್ಳಬೇಕೆಂದು ತಹಸೀಲ್ದಾರ್ ಶ್ರೀಶೈಲ ಯಮನಪ್ಪ ತಳವಾರ ಮನವಿ ಮಾಡಿದರು.
ತಾಲೂಕಿನ ಚಿಕ್ಕತುಪ್ಪೂರು ಗ್ರಾಮ ಒನ್ ಕೇಂದ್ರದಲ್ಲಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಗೃಹ ಯೋಜನೆ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಕುಟುಂಬದ ಮುಖ್ಯಸ್ಥೆ ಬ್ಯಾಂಕ್ ಖಾತೆಗೆ ಮಾಸಿಕ ಎರಡು ಸಾವಿರ ಹಣ ಜಮೆ ಮಾಡುವ ಯೋಜನೆ ಇದಾಗಿದೆ. ಯೋಜನೆಯ ಸೌಲಭ್ಯ ಪಡೆಯಲು ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರದಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹೆಸರು ನೋಂದಾಯಿಸಿಕೊಳ್ಳಲು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ.ಗ್ರಾಮ ಒನ್ ಕೇಂದ್ರದಿಂದ ನಿಮ್ಮ ಮೊಬೈಲ್‍ಗೆ ಎಸ್‍ಎಂಎಸ್ ಬಂದಾಗ ಭೇಟಿ ನೀಡಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಎಸ್‍ಎಂಂಎಸ್ ಬರದಿದ್ದರೆ ಸಹಾಯವಾಣಿ ನಂಬರ್‍ಗೆ ಕರೆ ಮಾಡಬಹುದು. ಒಂದು ಕೇಂದ್ರದಲ್ಲಿ ದಿನಕ್ಕೆ 60 ಮಂದಿಗೆ ಎಸ್‍ಎಂಎಸ್ ಕಳುಹಿಸುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿ, ಜನರು ಆತುರ ಮಾಡಿಕೊಳ್ಳುವುದು ಬೇಡ. ಪ್ರತಿಯೊಬ್ಬರಿಗೂ ಸೌಲಭ್ಯದ ಸದುಪಯೋಗ ಕೊಡಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಏನೇ ಸಮಸ್ಯೆಗಳಿದ್ದರೂ ಸಂಬಂಧಿಸಿದವರ ಗಮನಕ್ಕೆ ತರುವಂತೆ ಸಲಹೆ ನೀಡಿದರು.
ಈ ಸಂರ್ಭದಲ್ಲಿ ಬನ್ನಿತಾಳಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ತಾಯಮಣಿ ಮಲ್ಲು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಶ್ರೀಕಂಠರಾಜೇ ಅರಸ್, ಗ್ರಾಮ ಪಂಚಾಯತಿ ಸದಸ್ಯರಾದ ಪಿನ್ನಮ್ಮರಂಗಸ್ವಾಮಿ, ನಿಂಗರಾಜು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೇಮಾವತಿ, ಅಂಗನವಾಡಿ ಕಾರ್ಯಕತೆರ್Àಯರಾದ ನಿರ್ಮಲ, ಉಮಾ, ಗಂಗಮ್ಮ, ಗ್ರಾಮ ಒನ್ ಕೇಂದ್ರದ ಯೋಗೇಶ್ ಕುಮಾರ್, ರಾಜೇಶ್ವರಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.