Friday, April 18, 2025
Google search engine

Homeರಾಜ್ಯಸುದ್ದಿಜಾಲಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಯೋಜನೆ ಸ್ಥಗಿತ : ಹೆಚ್.ಡಿ. ದೇವೇಗೌಡ ಆರೋಪ

ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಯೋಜನೆ ಸ್ಥಗಿತ : ಹೆಚ್.ಡಿ. ದೇವೇಗೌಡ ಆರೋಪ

ರಾಮನಗರ: ರಾಜ್ಯ ಕಾಂಗ್ರೆಸ್ ಸರ್ಕಾರ ಖಜಾನೆಯನ್ನು ದಿವಾಳಿ ಎಬ್ಬಿಸಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಹಣವಿಲ್ಲ, ಆದರೆ ಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಅವರು ಆರೋಪಿಸಿದರು.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ನಡೆಸಿದ ಅವರು ಕಾಂಗ್ರೆಸ್ ಸರಕಾರ ಅಪರಿಮಿತವಾಗಿ ಚುನಾವಣಾ ಅಕ್ರಮಗಳನ್ನು ಎಸಗುತ್ತಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೂಡ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.

ಈ ಸರಕಾರ ದಿವಾಳಿಯಾಗಿದೆ. ಚುನಾವಣೆ ಮುಗಿದ ಮೇಲೆ‌ ಹಣ ಜಮೆ ಮಾಡುವುದನ್ನು ಮತ್ತೆ ನಿಲ್ಲಿಸುತ್ತಾರೆ. ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಕಸಿದುಕೊಂಡು ಹೋಗಿದ್ದಾರೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚೋಕೆ ಕಾಸಿಲ್ಲ, ಜನ ಉಗಿಯುತ್ತಿದ್ದಾರೆ ಎಂದು ಮಾಜಿ ಪ್ರಧಾನಿಗಳು ಆಕ್ರೋಶ ವ್ಯಕ್ತಪಡಿಸಿದರು.

ನಿಖಿಲ್ ಅವರನ್ನು ವಿಧಾನಸೌಧಕ್ಕೆ ಕಳಿಸಿ. ಆ ಹುಡುಗ ನಿಮ್ಮ ಪರವಾಗಿ ದನಿ ಎತ್ತುತ್ತಾನೆ. ಇದರಲ್ಲಿ ನಿಮಗೆ ಯಾವುದೇ ಸಂಶಯ ಬೇಡ ಎಂದ ಅವರು; ನಾನು ಒಬ್ಬ ರೈತನ ಮಗ, ನೀವು ರೈತನ ಮಕ್ಕಳು. ಇಗ್ಗಲೂರು ಅಣೆಕಟ್ಟು ಕಟ್ಟಿಸಿದ್ದು ಈ ದೇವೇಗೌಡ, ಬದುಕಿದ್ದಾನೆ. ಹದಿನೇಳು ಕೆರಗಳಿಗೆ ನೀರು ಹರಿಸಿದ್ದ ವ್ಯಕ್ತಿಯನ್ನು ಭಗೀರಥ ಅಂತಾರೆ. ಈ ಅಣೆಕಟ್ಟು ಕಟ್ಟಿಲ್ಲ ಅಂದರೆ ನೀರು ಹರಿಸೋಕೆ ಸಾಧ್ಯ ಆಗುತ್ತಿತ್ತಾ? ಎಂದು ಜನತೆಯಲ್ಲಿ ಕೇಳಿದರು ಮಾಜಿ ಪ್ರಧಾನಿಗಳು.

ನಿಖಿಲ್ ಕುಮಾರಸ್ವಾಮಿ ಅವರು 2028ಕ್ಕೆ ಸ್ಪರ್ಧೆ ಮಾಡುತ್ತೇನೆ, ನಾನು ಪಕ್ಷ ಕಟ್ಟುತ್ತೇನೆ ಎಂದರು. ನಾಮಪತ್ರ ಸಲ್ಲಿಸುವ ಹಿಂದಿನ ದಿನ ಪ್ರಧಾನಿ ನರೇಂದ್ರ ಮೋದಿ, ನಡ್ಡಾ, ಅಮಿಶ್ ಶಾ ಅವರೆಲ್ಲರೂ ಸೇರಿ ನಿಖಿಲ್ ಕುಮಾರಸ್ವಾಮಿ ಅವರನ್ನು ನಿಲ್ಲಿಸಲು ತೀರ್ಮಾನ ಮಾಡಿದರು. ಈ ಯುವಕ ನಿಮ್ಮ ಮೊಮ್ಮಗನಿದ್ದ ಹಾಗೆ,ವಿಧಾನಸಭೆಗೆ ಆಯ್ಕೆ ಮಾಡಿ ಆಶೀರ್ವಾದ ಮಾಡಿ. ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ. ನಮ್ಮ ಹೆಣ್ಣು ಮಕ್ಕಳು ಮನಸ್ಸು ಮಾಡಿದರೆ ನಿಖಿಲ್ ಕುಮಾರಸ್ವಾಮಿ ವಿಧಾನಸೌಧಕ್ಕೆ ಹೋಗುವುದು 100ಕ್ಕೆ 100 ಸತ್ಯ ಎಂದು ಮಾಜಿ ಪ್ರಧಾನಿಗಳು ಹೇಳಿದರು.

RELATED ARTICLES
- Advertisment -
Google search engine

Most Popular