Friday, April 18, 2025
Google search engine

Homeರಾಜ್ಯಸತ್ಯಹರಿಶ್ಚಂದ್ರ ಸತ್ತ ನಂತರ ಇಬ್ಬರೇ ಸತ್ಯಹರಿಶ್ಚಂದ್ರರು  ಇರೋದು, ಒಬ್ಬರು ಹೆಚ್.ಡಿ.ಕುಮಾರಸ್ವಾಮಿ, ಇನ್ನೊಬ್ಬರು ಬಸವರಾಜ ಬೊಮ್ಮಾಯಿ: ಹೆಚ್.ವಿಶ್ವನಾಥ್...

ಸತ್ಯಹರಿಶ್ಚಂದ್ರ ಸತ್ತ ನಂತರ ಇಬ್ಬರೇ ಸತ್ಯಹರಿಶ್ಚಂದ್ರರು  ಇರೋದು, ಒಬ್ಬರು ಹೆಚ್.ಡಿ.ಕುಮಾರಸ್ವಾಮಿ, ಇನ್ನೊಬ್ಬರು ಬಸವರಾಜ ಬೊಮ್ಮಾಯಿ: ಹೆಚ್.ವಿಶ್ವನಾಥ್ ವ್ಯಂಗ್ಯ

ಮೈಸೂರು: ಸತ್ಯಹರಿಶ್ಚಂದ್ರ ಸತ್ತ ಮೇಲೆ ರಾಜ್ಯದಲ್ಲಿ ಇಬ್ಬರೇ ಸತ್ಯಹರಿಶ್ಚಂದ್ರರು ಇರೋದು. ಒಬ್ಬರು ಎಚ್.ಡಿ. ಕುಮಾರಸ್ವಾಮಿ, ಇನ್ನೊಬ್ಬರು ಬಸವರಾಜ ಬೊಮ್ಮಾಯಿ ಎಂದು ವಿಧಾನ ಪರಿಷತ್ತು ಸದಸ್ಯ ಅಡಗೂರು ಎಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ಇಬ್ಬರೂ ಮುಖ್ಯಮಂತ್ರಿ ಆಗಿದ್ದವರು.  ಆಗ ಮಾಡಿದ ಅದ್ವಾನಗಳನ್ನು ಜನ ಈಗಲೂ ಅನುಭವಿಸುತ್ತಿದ್ದಾರೆ. ಕುಮಾರಸ್ವಾಮಿ ಅವರೇ ಆ ಪೆನ್ ಡ್ರೈವ್ ಏನಾಯ್ತು ? ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡಬೇಡಿ. ಏನೇನೋ ಆರೋಪ ಮಾಡುತ್ತೀರಿ ? ಆದರೆ ಯಾವುದನ್ನು ಸಾಬೀತು ಮಾಡಿದ್ದೀರಿ ? ಎಂದು ಪ್ರಶ್ನಿಸಿದ್ದಾರೆ.

ನೀವು ಮುಖ್ಯಮಂತ್ರಿ ಆಗಿದ್ದವರು. ಮಾತಿನಿಂದ ನಿಮ್ಮ ಘನತೆ ಕಡಿಮೆ ಆಗುತ್ತಿದೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್ ಹೇಳಿದರು.

RELATED ARTICLES
- Advertisment -
Google search engine

Most Popular