ಮಂಡ್ಯ: ತಮಿಳುನಾಡಿಗೆ ಮತ್ತೆ ನೀರು ಬಿಡಲು ಪ್ರಾಧಿಕಾರದ ಆದೇಶ ಹಿನ್ನೆಲೆ, ಮಂಡ್ಯದಲ್ಲಿ ಮತ್ತೆ ಹೆದ್ದಾರಿಗಿಳಿದು ರೈತರು ಪ್ರತಿಭಟನೆ ನಡೆಸಿದರು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು – ಮೈಸೂರು ಹೆದ್ದಾರಿ ತಡೆದು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಕಳೆದ 108 ದಿನಗಳಿಂದ ಧರಣಿ ,ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದು, ಜೊತೆಗೆ 27 ದಿನದ ಉಪವಾಸ ಸತ್ಯಾಗ್ರಹ, ನಿರಂತರ ಹೋರಾಟ ಮಾಡುತ್ತಿದ್ದರೂ ,ರಾಜ್ಯದ ರೈತರ ಹಿತ ಕಾಯದೆ ನಿರಂತರವಾಗಿ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಎಲ್ಲಾ ರಾಜಕೀಯ ಪಕ್ಷಗಳ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.