Wednesday, July 16, 2025
Google search engine

Homeರಾಜ್ಯವಾಯುಭಾರ ಕುಸಿತ : ಬೆಂಗಳೂರು ಸೇರಿ ರಾಜ್ಯಾದ್ಯಂತ 3 ದಿನ ಭಾರೀ ಮಳೆ

ವಾಯುಭಾರ ಕುಸಿತ : ಬೆಂಗಳೂರು ಸೇರಿ ರಾಜ್ಯಾದ್ಯಂತ 3 ದಿನ ಭಾರೀ ಮಳೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ ಮೂರು ದಿನ ಧಾರಾಕಾರ ಮಳೆ ಆಗುವ ಸಾಧ್ಯತೆ ಇದ್ದು, ಕರಾವಳಿ ಹಾಗೂ ಒಳನಾಡು ಸೇರಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಬೆಂಗಳೂರಿಗೆ ಜುಲೈ 18 ಮತ್ತು 19 ರಂದು ಸಾಧಾರಣದಿಂದ ಭಾರೀ ಮಳೆ ಬರಲಿದೆ. ಇದರೊಂದಿಗೆ ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಹ ಭಾರೀ ಮಳೆ ನಿರೀಕ್ಷೆ ಹಿನ್ನೆಲೆ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಅರಬ್ಬಿ ಸಮುದ್ರ ಭಾಗದಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿ ರುವ ಕಾರಣ ಮುಂದಿನ ಮೂರುದಿನ ಗಳಲ್ಲಿ ಒಳನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಜುಲೈ 16 ಮತ್ತು 17 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಬರಲಿದ್ದು, ಎರಡು ದಿನ ‘ಆರೆಂಜ್ ಅಲರ್ಟ್’ ನೀಡಲಾಗಿದೆ.

RELATED ARTICLES
- Advertisment -
Google search engine

Most Popular