ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಫೆಬ್ರವರಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಬೇಸಿಗೆ ಸಾಮಾನ್ಯಕ್ಕಿಂತ ಮುಂಚಿತವಾಗಿ ಬರಬಹುದು. ಉತ್ತರ ಕನ್ನಡ ಮತ್ತು ಗದಗ ಸೇರಿದಂತೆ ಕರ್ನಾಟಕದ ಹಲವಾರು ಪ್ರದೇಶಗಳಲ್ಲಿ ಶೀತ ಅಲೆಗಳು ಮತ್ತು ಒಣ ಹವಾಮಾನವನ್ನು ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ