ಬೆಂಗಳೂರು : ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಇಂದು ಬುಧವಾರ ಮಾಜಿ ಸಿಎಂ ಯಡಿಯೂರಪ್ಪ ಉಪಸ್ಥಿತಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಮಾಜಿ ಸಿಎಂ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ನೆಡೆದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬಿಜೆಪಿ ಸೇರಿದರು. ಈ ವೇಳೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಅವರು, ಚುನಾವಣೆ ಸಂದರ್ಭದಲ್ಲಿ ಅಖಂಡ ಶ್ರೀನಿವಾಸಮೂರ್ತಿಯವರ ಸೇರ್ಪಡೆ ಪಕ್ಷಕ್ಕೆ ದೊಡ್ಡ ಶಕ್ತಿ ಕೊಟ್ಟಂತಾಗಿದೆ. ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಾಟೆ ಆದಾಗ ಅಖಂಡ ಶ್ರೀನಿವಾಸಮೂರ್ತಿಯವರ ಮನೆಯನ್ನು ಸುಡಲಾಗಿತ್ತು. ಆಗ ಕಾಂಗ್ರೆಸ್‌ನವರು ಬೆಂಬಲ ಕೊಡಲಿಲ್ಲ. ನಾವು ಆಗ ಶ್ರೀನಿವಾಸಮೂರ್ತಿ ಅವರ ಜೊತೆ ಗಟ್ಟಿಯಾಗಿ ನಿಂತಿದ್ದೆವು ಎಂದು ಹೇಳಿದರು.
ಬೆಂಬಲಿಗರ ಜೊತೆ ಅಖಂಡ ಶ್ರೀನಿವಾಸಮೂರ್ತಿಯವರ ಪಕ್ಷ ಸೇರುವಿಕೆಯಿಂದ ಆನೆ ಬಲ ಬಂದಂತಾಗಿದೆ. ಅವರಿಗೆ ನಿಮ್ಮೆಲ್ಲರ ಪರವಾಗಿ ಸ್ವಾಗತ ಎಂದು ತಿಳಿಸಿದರು. ಇಂಥ ವಿಶೇಷ ಸಂದರ್ಭದಲ್ಲಿ ಉಪಸ್ಥಿತರೆಲ್ಲರಿಗೆ ವಂದನೆಗಳು ಎಂದು ತಿಳಿಸಿದರು.