Friday, April 4, 2025
Google search engine

Homeರಾಜ್ಯಆಲಮಟ್ಟಿ ಜಲಾಶಯ ಭರ್ತಿ: ಆಗಸ್ಟ್ 21ರಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ಆಲಮಟ್ಟಿ ಜಲಾಶಯ ಭರ್ತಿ: ಆಗಸ್ಟ್ 21ರಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ಉತ್ತರ ಕರ್ನಾಟಕದ ಜೀವನದಿಯಾಗಿರುವ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದೆ. ಆಲಮಟ್ಟಿ ಜಲಾಶಯ ಉತ್ತರ ಕರ್ನಾಟಕದ ಜೀವನಾಡಿಯಾಗಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಜಲಾಶಯ 9 ಜಿಲ್ಲೆಗಳಿಗೆ ನೀರು ಒದಗಿಸುತ್ತದೆ. ಈ ಜಲಾಶಯದಲ್ಲಿ ವಿದ್ಯುತ್​ ಉತ್ಪಾದನೆ ಮಾಡಲಾಗುತ್ತದೆ.

ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಳಗ್ಗೆ 10 ಗಂಟೆಗೆ ಹೆಚ್​​ಎಎಲ್​ನಿಂದ ವಿಮಾನದಲ್ಲಿ ಹೊರಟು 10:50ಕ್ಕೆ ಕೊಪ್ಪಳದ ಗಿಣಿಗೇರಾ ಏರ್​ಸ್ಟ್ರಿಪ್​ಗೆ ತಲುಪಲಿದ್ದಾರೆ. ನಂತರ ಗಿಣಿಗೇರಾದಿಂದ ರಸ್ತೆ ಮಾರ್ಗವಾಗಿ ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಮಧ್ಯಾಹ್ನ 12.30ಕ್ಕೆ ತಲುಪಲಿದ್ದಾರೆ.

ಅಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಲಮಟ್ಟಿ ಜಲಾಯಶದ ಬಳಿ ಮೊದಲಿಗೆ ಕೃಷ್ಣಾ ನದಿಗೆ ಪೂಜೆ ಸಲ್ಲಿಸಲಿದ್ದಾರೆ. ನಂತರ ಬಾಗಿನ ಅರ್ಪಿಸಲಿದ್ದಾರೆ. ಬಳಿಕ ಮದ್ಯಾಹ್ನ 3 ಗಂಟೆಗೆ ರಸ್ತೆ ಮಾರ್ಗವಾಗಿ ಮತ್ತೆ ಗಿಣಿಗೇರಾಕ್ಕೆ ತೆರಳಿ, ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ.

ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಎಂ ಬಿ ಪಾಟೀಲ್, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್​.ಬಿ ತಿಮ್ಮಾಪುರ ಸೇರಿದಂತೆ ಉಭಯ ಜಿಲ್ಲೆಯ ಶಾಸಕರು ಅಧಿಕಾರಿಗಳು ಭಾಗಿಯಾಗಲಿದ್ದಾರೆ.

RELATED ARTICLES
- Advertisment -
Google search engine

Most Popular