Saturday, May 10, 2025
Google search engine

Homeರಾಜ್ಯಸುದ್ದಿಜಾಲಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನ: ಸೆ. 8 ರಿಂದ 10ರವರೆಗೆ ಬೆಂಗಳೂರಿನಲ್ಲಿ ಗ್ರ್ಯಾಂಡ್ ವೇದಿಕೆ

ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನ: ಸೆ. 8 ರಿಂದ 10ರವರೆಗೆ ಬೆಂಗಳೂರಿನಲ್ಲಿ ಗ್ರ್ಯಾಂಡ್ ವೇದಿಕೆ

ಮಂಗಳೂರು ದಕ್ಷಿಣ ಕನ್ನಡ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸೆಪ್ಟೆಂಬರ್ 8ರಿಂದ 10ರವರೆಗೆ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಶನ್‌ನ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.

ಮಂಗಳೂರು ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಲೋಕಸಭಾ ಸ್ಪೀಕರ್ ಅವರು ಕರ್ನಾಟದಲ್ಲಿ ಈ ಬಾರಿ ನಡೆಸಲು ಅವಕಾಶ ನೀಡಿದ್ದು, ಬೆಂಗಳೂರಿನಲ್ಲಿ ಈ ಸಮಾವೇಶ ಸಂಘಟಿಸಲು ತೀರ್ಮಾನಿಸಲಾಗಿದೆ ಎಂದರು.


ದೇಶದ ಎಲ್ಲಾ ರಾಜ್ಯಗಳ ವಿಧಾನಸಭೆ ಮತ್ತು ವಿಧಾನ ಪರಿಷತ್ತುಗಳ ಸ್ಪೀಕರ್, ಡೆಪ್ಯುಟಿ ಸ್ಪೀಕರ್‌ಗಳು, ಕಾರ್ಯದರ್ಶಿಗಳು ಸೇರಿದಂತೆ 300ರಷ್ಟು ಮಂದಿ ಭಾಗವಹಿಸಲಿದ್ದಾರೆ. ಸೆ.8ರಂದು ಸಂಜೆ 6 ಗಂಟೆಗೆ ವಿಧಾನ ಸೌಧದ ಗ್ರೌಂಡ್ ಸ್ಟೆಪ್‌ನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಈ ಸಮ್ಮೇಳನಕ್ಕೆ ಚಾಲನೆ ದೊರಯಲಿದೆ. ಲೋಕಸಭೆ ಸ್ಪೀಕರ್, ರಾಷ್ಟ್ರಪತಿ, ಉಪ ರಾಷ್ಟ್ರಪತಿ ಸೇರಿದಂತೆ ಇತರ ಹಲವು ಗಣ್ಯರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಕಳೆದ ವರ್ಷ ಹೊಸದಿಲ್ಲಿಯಲ್ಲಿ ಈ ಸಮಾವೇಶ ನಡೆದಿದ್ದರೆ, ಅದಕ್ಕಿಂತ ಹಿಂದಿನ ವರ್ಷ ರಾಜಸ್ತಾನದಲ್ಲಿ ನಡೆದಿತ್ತು. ಇದೀಗ ಮೊದಲ ಬಾರಿಗೆ ಕರ್ನಾಟಕದಲ್ಲಿ ನನ್ನ ಮತ್ತು ವಿಧಾನ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಅವರ ಅವಧಿಯಲ್ಲಿ ಈ ಅವಕಾಶ ದೊರಕಿದೆ. ಈ ಸಮ್ಮೇಳನವನ್ನು ಮಾದರಿಯಾಗಿ ನಡೆಸಲಾಗುವುದು. ಕೆಲವು ವಿಷಯಗಳ ಆಧಾರದಲ್ಲಿ ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ. ಸಂಸದೀಯ ಪ್ರಕ್ರಿಯೆಗಳನ್ನು ಬಲಪಡಿಸುವುದು, ಸ್ಪೀಕರ್‌ಗಳ ಪಾತ್ರ, ಪ್ರಸಕ್ತ ವಿಚಾರಗಳಿಗೆ ಸಂಬಂಧಿಸಿ ಚರ್ಚೆನಡೆಯಲಿದೆ ಎಂದು ಅವರು ಹೇಳಿದರು.

RELATED ARTICLES
- Advertisment -
Google search engine

Most Popular