Monday, April 7, 2025
Google search engine

Homeರಾಜ್ಯಸುದ್ದಿಜಾಲಮಹಿಳೆಯರ ಹಕ್ಕುಗಳನ್ನು ಸಂರಕ್ಷಿಸಲು ಎಲ್ಲರೂ ಕೈಜೋಡಿಸಿ: ಎಸ್.ಜಿ ಸಲಗರೆ

ಮಹಿಳೆಯರ ಹಕ್ಕುಗಳನ್ನು ಸಂರಕ್ಷಿಸಲು ಎಲ್ಲರೂ ಕೈಜೋಡಿಸಿ: ಎಸ್.ಜಿ ಸಲಗರೆ

ದಾವಣಗೆರೆ: ಸಮಾಜದಲ್ಲಿ ಮಹಿಳೆಯರ ಮೇಲಾಗುತ್ತಿರುವಂತಹ ದೌರ್ಜನ್ಯ, ಶೋಷಣೆಗಳನ್ನು ತಡೆಗಟ್ಟಬೇಕು ಮತ್ತು ಅವರ ಮೂಲಭೂತ ಹಕ್ಕುಗಳನ್ನು ಸಂರಕ್ಷಿಸಲು ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ಎಸ್.ಜಿ ಸಲಗರೆ ತಿಳಿಸಿದರು. ಶುಕ್ರವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜರುಗಿದ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳು ಶಿಕ್ಷಣವಂತರಾಗಿ ಎಲ್ಲಾ ಕ್ಷೇತ್ರದಲ್ಲಿ ಕೂಡ ತಮ್ಮದೇ ಆದ ಸಾಧನೆ ಮಾಡುತ್ತಿದ್ದಾರೆ. ಪುರುಷ ಪ್ರಧಾನ ಸಮಾಜವನ್ನು ನಾವು ಕಾಣಬಹುದಾಗಿದ್ದು ಇದನ್ನು ತೊಲಗಿಸಬೇಕು. ಹೆಣ್ಣು ಸಹ ಗಂಡಿನ ಸಮಥ್ರ್ಯವನ್ನೇ ಉಳ್ಳವರಾಗಿದ್ದಾರೆ.
ಸಮಾಜದಲ್ಲಿ ಮಹಿಳೆಯರ ಮೇಲಾಗುತ್ತಿರುವಂತಹ ದೌರ್ಜನ್ಯ ಶೋಷಣೆಗಳನ್ನು ತಡೆಗಟ್ಟಿ ಮತ್ತು ಯಾವ ಮಹಿಳೆ ಕಾನೂನು, ಹಕ್ಕುಗಳಿಂದ ವಂಚಿತರಾಗಿದ್ದಾರೋ ಅವರಿಗೆ ನ್ಯಾಯ ಒದಗಿಸಲು ಪ್ರಯತ್ನಿಸಬೇಕು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ ಮಹಿಳೆಯರು ಹಿಂದಿನ ಕಾಲದಿಂದಲೂ ದೌರ್ಜನ್ಯ, ತಾರತಮ್ಯ, ಶೋಷಣೆಗೆ ಒಳಗಾಗಿದ್ದಾರೆ. ಈ ನಿಟ್ಟಿನಲ್ಲಿ ಹೆಣ್ಣು ಶಿಕ್ಷಣದಿಂದ ತನ್ನನ್ನು ತಾನು ಸಬಲೀಕರಣಗೊಳ್ಳಬೇಕಾಗಿದೆ. ಶಿಕ್ಷಣದ ಜೊತೆಗೆ ಹೆಣ್ಣು ಮಕ್ಕಳು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು
ಪ್ರತಿಯೊಂದು ಹೆಣ್ಣಿಗೆ ತನ್ನದೇ ಆದ ಸಮಥ್ರ್ಯವಿದೆ, ಅದನ್ನು ತೋರ್ಪಡಿಸುವಂತಾಗಬೇಕು. ಕೇವಲ ಫಲಿತಾಂಶಕ್ಕಾಗಿ ಶಿಕ್ಷಣವನ್ನು ಪಡೆಯದೆ ಸಮಾಜದಲ್ಲಿ ಒಂದು ಹೆಣ್ಣು ಬದುಕುವುದನ್ನು ಶಿಕ್ಷಣವಂತಳಗಾಬೇಕು. ಮತ್ತು ತನ್ನು ಕುಟುಂಬದ ನಿರ್ವಹಣೆಯ ಸಮಥ್ರ್ಯವನ್ನು ಹಪೊಂದಬೇಕು.

ಮಹಿಳೆಯರಿಗೆ ಮತ್ತು ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾದಲ್ಲಿ 1098, 112ಗೆ ಸಂಪರ್ಕಿಸಬಹುದಾಗಿದೆ.
ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ನಿರ್ದೇಶಕರಾದ ಪ್ರೋ.ವೈ.ವೃಷಬೇಂದ್ರಪ್ಪ ಇವರು ಅಧ್ಯಕ್ಷತೆವಹಿಸಿದ್ದರು. ಎರಡನೇ ಅಪರ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಬಾಲ ನ್ಯಾಯ ಮಂಡಳಿಯ ಅಧ್ಯಕ್ಷರಾದ ರೇಷ್ಮಾ ಹೆಚ್.ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಮಹಾವೀರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಎಲ್.ಹೆಚ್, ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ. ಲೀಲಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular