ಬೆಂಗಳೂರು : ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರ ಮೊದಲಿನಿಂದಲೂ ಎಲ್ಲಾ ರೀತಿಯ ಸಹಾಯವನ್ನು ಮಾಡುತ್ತಾ ಬಂದಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಚಲನಚಿತ್ರ ನಿರ್ಮಾಪಕರಿಗೆ ಇಲ್ಲಿಯವರೆಗೆ ಸ್ವಂತ ಕಟ್ಟಡ ಇರಲಿಲ್ಲ. ಸ್ವಂತ ಕಟ್ಟಡ ನಿರ್ಮಾಣವಾಗಿದ್ದು , ಅದರ ಉದ್ಘಾಟನೆಯನ್ನು ನೆರವೇರಿಸಿದ್ದೇನೆ ಎಂದರು. ೧೯೭೨ ರಿಂದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದವರು ಅನೇಕ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹಳ ಕಷ್ಟದ ದಿನಗಳಿದ್ದರೂ ಕೂಡ ಚಲನಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ನಿರ್ಮಾಪಕರಿಗೆ ಅಭಿನಂದಿಸುತ್ತೇನೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದರು.
ಆರ್ಥಿಕ ಸಹಾಯವನ್ನು ಸಂಘ ಕೇಳಿಯೇ ಇಲ್ಲ. ಸರ್ಕಾರದಿಂದ ಆರ್ಥಿಕ ಸಹಾಯ ಮಾಡಿಯೇ ಮಾಡುತ್ತದೆ ಎಂದರು. ಕನ್ನಡದಲ್ಲಿ ಸರ್ಕಾರದ ವತಿಯಿಂದ ಓಟಿಟಿ ವೇದಿಕೆ ಸೃಜಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ ಸರ್ಕಾರ ಇದನ್ನು ಪರಿಶೀಲಿಸಿದ ಕ್ರಮ ಕೈಗೊಳ್ಳಲಿದೆ. ಕನ್ನಡ ಚಿತ್ರಗಳಿಗೆ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ ಎಂದರು.
ಡಾ: ರಾಜ್ ಕುಮಾರ್ ಅವರ ಕನಸಾಗಿಸಲಾಗುವುದು: ಮೈಸೂರಿನಲ್ಲಿ ಚಿತ್ರ ನಗರಿ ನಿರ್ಮಾಣವನ್ನು ಪಿ.ಪಿ.ಪಿ ಮಾದರಿಯಲ್ಲಿ ಕೈಗೊಳ್ಳಲಿದ್ದು, ನೂರು ಎಕರೆಗೂ ಹೆಚ್ಚು ಜಮೀನು ಒದಗಿಸಿದೆ . ಚಿತ್ರನಗರಿ ಡಾ: ರಾಜ್ ಕುಮಾರ್ ಅವರ ಕನಸಾಗಿತ್ತು ಅದನ್ನು ನನಸಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು.
ಪ್ರಧಾನಿಗಳಿಗೆ ಮನವಿ: ನವದೆಹಲಿಯಲ್ಲಿ ಪ್ರಧಾನಿಯವರನ್ನು ಭೇಟಿಯಾಗಿ ರಾಜ್ಯ ಮನವಿ ಸಲ್ಲಿಸಲಾಗಿದೆ. ಸಂಪನ್ಮೂಲಗಳು, ಕೇಂದ್ರದಿಂದ ಬರಬೇಕಿರುವ ಬಾಕಿ ಅನುದಾನದ ಬಗ್ಗೆ ಕೋರಲಾಗಿದೆ ಎಂದರು.