Friday, April 4, 2025
Google search engine

Homeರಾಜ್ಯನಿಮ್ಮೆಲ್ಲರ ಆರೋಗ್ಯ, ಜೀವವೂ ಮುಖ್ಯ: ಪ್ರತಿಭಟನೆ ವೇಳೆ ಎಚ್ಚರಿಕೆಯಿಂದಿರಿ- ಸಿಎಂ ಸಿದ್ದರಾಮಯ್ಯ ಮನವಿ

ನಿಮ್ಮೆಲ್ಲರ ಆರೋಗ್ಯ, ಜೀವವೂ ಮುಖ್ಯ: ಪ್ರತಿಭಟನೆ ವೇಳೆ ಎಚ್ಚರಿಕೆಯಿಂದಿರಿ- ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲ ನಡೆ ವಿರುದ್ದ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಈ ಮಧ್ಯೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಎಂ ಸಿದ್ದರಾಮಯ್ಯ ಮನವಿಯೊಂದನ್ನ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಟೈರ್ ಗೆ ಬೆಂಕಿ ಹಚ್ಚುವ ವೇಳೆ ದ್ಯಾಮಪ್ಪ ಎಂಬುವವರು ಗಾಯಗೊಂಡಿದ್ದರು. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರ ಕಾನೂನು ಬಾಹಿರ ನಿರ್ಣಯ ಖಂಡಿಸಿ ಬಾಗಲಕೋಟೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ದ್ಯಾಮಪ್ಪ ಎಂಬ ನನ್ನ ಅಭಿಮಾನಿಯೊಬ್ಬರು ಗಾಯಗೊಂಡ ವಿಚಾರ ಈಗಷ್ಟೆ ತಿಳಿಯಿತು.

ದೇಶದ ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗಾಗಿ ನನ್ನ ಮತ್ತು ನಮ್ಮ ಪಕ್ಷದ ಪರವಾಗಿ ಇಂದು ಹೋರಾಟ ನಡೆಸುತ್ತಿರುವ ನನ್ನೆಲ್ಲ ಆತ್ಮೀಯ ಬಂಧುಗಳು ಪ್ರತಿಭಟನೆಯ ವೇಳೆ ದಯವಿಟ್ಟು ಎಚ್ಚರಿಕೆಯಿಂದಿರಿ. ನಿಮ್ಮ ಕಾಳಜಿ, ಆಕ್ರೋಶವನ್ನು ನಾನು ಅರ್ಥೈಸಿಕೊಳ್ಳಬಲ್ಲೆ ಆದರೆ ನನಗೆ ನಿಮ್ಮೆಲ್ಲರ ಆರೋಗ್ಯ, ಜೀವವೂ ಮುಖ್ಯ. ನಿಮ್ಮ ಪ್ರೀತಿಗೆ ನಾನು ಸದಾ ಋಣಿ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular