Monday, April 21, 2025
Google search engine

Homeಅಪರಾಧಕಾನೂನುಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ: ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ: ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.

ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಹಾಸನದ ಆಹಾರ ನೀರಿಕ್ಷಕ ಜಗನ್ನಾಥ್ ಮನೆ, ಕಚೇರಿ ಮೇಲೆ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಾಸನದ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಫುಡ್ ಇನ್ಸ್‌ ಪೆಕ್ಟರ್ ಜಗನ್ನಾಥ್ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಕಚೇರಿ ಹಾಗೂ ನಿವಾಸದಲ್ಲಿ ತಲಾಶ್ ಕೈಗೊಂಡಿದ್ದಾರೆ. ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್ಸ್‌ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿದೆ.

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ನೇತ್ರಾವತಿ ಮನೆ ಮೇಲೆ ದಾಳಿ‌

ಚಿಕ್ಕಮಗಳೂರು ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ತರೀಕೆರೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ‌ ನಡೆಸಿದೆ. 13 ವರ್ಷದಿಂದ ಅಧಿಕ ಅಸ್ತಿ ಹೊಂದಿರುವ ಆರೋಪದಡಿಯಲ್ಲಿ ಲೋಕಾಯುಕ್ತ ಇನ್ಸ್ ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ಕಡೂರು ಪಟ್ಟಣದಲ್ಲಿರುವ ನೇತ್ರಾವತಿ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ಮಾಡಲಾಗುತ್ತಿದೆ.

ಮುಡಾ ಇಂಜಿನಿಯರ್ ಯಜ್ಞೇಂದ್ರ ಮನೆ ಮೇಲೆ ರೇಡ್​​

ಮುಡಾ ಇಂಜಿನಿಯರ್ ಯಜ್ಞೇಂದ್ರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದಾರೆ.​​ ಮೈಸೂರಿನ ಜೆ.ಪಿ.ನಗರದ ಮನೆ, ವಿಜಯನಗರದ ಅಪಾರ್ಟ್‌ಮೆಂಟ್, ಕೆ.ಆರ್.ನಗರ ತಾಲೂಕಿನ ನಗರ್ಲೆ ಗ್ರಾಮದಲ್ಲಿರುವ ಯಜ್ಞೇಂದ್ರ ಸಹೋದರನ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

KRDL ಇಂಜಿನಿಯರ್​ ಹನುಮಂತರಾಯಪ್ಪ ಮನೆ ಮೇಲೆ ದಾಳಿ

ತುಮಕೂರಿನಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ತುಮಕೂರಿನ ಶಿರಾ ಗೇಟ್ ಬಳಿಯಿರುವ KRDL ಇಂಜಿನಿಯರ್​ ಹನುಮಂತರಾಯಪ್ಪ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

RELATED ARTICLES
- Advertisment -
Google search engine

Most Popular