Friday, April 4, 2025
Google search engine

Homeಅಪರಾಧಕಾನೂನುಚುನಾವಣಾ ಬಾಂಡ್‌ ಮೂಲಕ ಸುಲಿಗೆ ಆರೋಪ: ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐ ಆರ್...

ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಆರೋಪ: ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐ ಆರ್ ಗೆ ಕೋರ್ಟ್​ ಆದೇಶ

ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಚುನಾವಣಾ ಬಾಂಡ್ ​ಗಳ ಮೂಲಕ ಸುಲಿಗೆ ಮಾಡಲಾಗಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು, ಬಿ.ವೈ.ವಿಜಯೇಂದ್ರ ವಿರುದ್ಧ ಜನಾಧಿಕಾರಿ ಸಂಘರ್ಷ ಪರಿಷತ್‌ನ(ಜೆಎಸ್​ಪಿ) ಆದರ್ಶ ಆರ್. ಐಯ್ಯ‌ರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರು ಸಂಬಂಧ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್, ದೂರಿನ ಪ್ರತಿ & ದಾಖಲೆ ಠಾಣೆಗೆ ಕಳುಹಿಸಲು ಸೂಚಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನ ತಿಲಕ್​​ನಗರ ಠಾಣೆಗೆ ಕಳಿಸುವಂತೆ ಕೋರ್ಟ್​​ನ ಕಚೇರಿಗೆ 42ನೇ ಎಸಿಎಂಎಂ ಜಡ್ಜ್​ ಸೂಚನೆ ನೀಡಿದ್ದಾರೆ. ಎಫ್ ಐ ಆರ್ ನಿರೀಕ್ಷೆಯಲ್ಲಿ ಎಂದು ವಿಚಾರಣೆ ಅ.10ಕ್ಕೆ ಮುಂದೂಡಲಾಗಿದೆ.

ತಿಲಕ್‌ನಗರ ಪೊಲೀಸರಿಗೆ ಎಫ್‌ಐಆ‌ರ್ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡ ನಳಿನ್‌ ಕುಮಾರ್‌ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಕಚೇರಿ ಮತ್ತು ಇ.ಡಿ. ಇಲಾಖೆ ವಿರುದ್ಧ ದೂರು ಸಲ್ಲಿಸಲಾಗಿದೆ.

2019 ಏಪ್ರಿಲ್‌ ತಿಂಗಳಿನಿಂದ 2022ರ ಆಗಸ್ಟ್ ತಿಂಗಳವರೆಗೆ ಉದ್ಯಮಿ ಅನಿಲ್ ಅಗಲ್‌ವಾಲ್ ಅವರ ಸಂಸ್ಥೆಯಿಂದ ಸುಮಾರು 230 ಕೋಟಿ ರುಪಾಯಿ ಮತ್ತು ಅರೊಬಿಂದೋ ಫಾರ್ಮಸಿ ಸಂಸ್ಥೆಯಿಂದ 49 ಕೋಟಿ ರೂ.ನಷ್ಟು ಚುನಾವಣಾ ಬಾಂಡ್‌ ಗಳ ಮೂಲಕ ವಸೂಲಿ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

RELATED ARTICLES
- Advertisment -
Google search engine

Most Popular