ಬೆಂಗಳೂರು: ಸ್ಯಾಂಡಲ್ ವುಡ್ ನಟ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸೆಟ್‌ಗೆ ಮರಗಳನ್ನು ಕಡಿದ ಆರೋಪದ ಹಿನ್ನೆಲೆ ಅರಣ್ಯ ಇಲಾಖೆ ಎಫ್‌ಐಆರ್ ದಾಖಲಿಸಿದೆ.
ಕೋರ್ಟ್ ನ ಆದೇಶ ಪಡೆದು ಅರಣ್ಯ ಇಲಾಖೆ ಎಫ್‌ಐಆರ್ ದಾಖಲಿಸಿದೆ. ಈ ಸಂಬಂಧ ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‌ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಅರಣ್ಯ ಇಲಾಖೆ ಎಫ್‌ಐಆರ್ ದಾಖಲು ಮಾಡಿದೆ.
ಟಾಕ್ಸಿಕ್ ಗಾಗಿ ಮರಗಳ ಮಾರಣಹೋಮದ ಆರೋಪ ಕೇಳಿ ಬಂದಿದ್ದ ಬೆನ್ನಲ್ಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮರ ಕಡಿದ ಆರೋಪ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.