Monday, April 21, 2025
Google search engine

Homeಅಪರಾಧಆರ್.ಅಶೋಕ್ ವಿರುದ್ಧ ಭೂ ಹಗರಣ, ಬಸ್ ಖರೀದಿ ಅವ್ಯವಹಾರ ಆರೋಪ: ನ್ಯಾಯಾಂಗ ತನಿಖೆಗೆ ರಮೇಶ ಬಾಬು...

ಆರ್.ಅಶೋಕ್ ವಿರುದ್ಧ ಭೂ ಹಗರಣ, ಬಸ್ ಖರೀದಿ ಅವ್ಯವಹಾರ ಆರೋಪ: ನ್ಯಾಯಾಂಗ ತನಿಖೆಗೆ ರಮೇಶ ಬಾಬು ಆಗ್ರಹ

ಬೆಂಗಳೂರು: ಬಗರ್ ಹುಕುಂ ಅಡಿಯಲ್ಲಿ ಫಲಾನುಭವಿಗಳಿಗೆ 2,500 ಎಕರೆ ಗೋಮಾಳದ ಹಂಚಿಕೆಯಲ್ಲಿ ಬಿಜೆಪಿ ನಾಯಕ ಆರ್. ಅಶೋಕ್ ಅವ್ಯವಹಾರ ನಡೆಸಿದ್ದಾರೆ ಹೀಗಾಗಿ ಅವರ ವಿರುದ್ಧ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥ ಮತ್ತು ಮಾಜಿ ಎಂಎಲ್‌ಸಿ ರಮೇಶ್ ಬಾಬು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‌ಅಶೋಕ ಅವರು ಬಗರ್ ಹುಕುಂ ಸಮಿತಿ ಅಧ್ಯಕ್ಷರಾಗಿದ್ದಾಗ ಕೆಂಗೇರಿ ಹೋಬಳಿಯ ಬಿ.ಎಂ. ಕಾವಲಿಗೆ ಸಂಬಂಧಪಟ್ಟಂತೆ 2,500 ಎಕರೆ ಭೂಮಿ ಹಂಚಿಕೆಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ. ಅಶೋಕ ಅವರ ಮೇಲೆ ಬಿಎಂಟಿಎಫ್‌ನಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಸುದ್ದಿ ಮಾಧ್ಯಮಗಳಲ್ಲಿ ವರದಿ ಬರಬಾರದೆಂದು ಅವರು ತಡೆಯಾಜ್ಞೆ ತಂದಿದ್ದರು. ತಮ್ಮ ಮೇಲೆ ಬಂದಿರುವ ಆರೋಪಗಳಿಗೆ ಉತ್ತರಿಸುವ ಶಕ್ತಿ ಅವರಿಗೆ ಇಲ್ಲ’ ಎಂದರು.

ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡುವವರು ಆರೋಪಗಳಿಂದ ಮುಕ್ತರಾಗಿರಬೇಕು. ಆದರೆ, ಅಶೋಕ ಆರೋಪ ಮುಕ್ತರಾಗಿ ಇದ್ದಾರೆಯೇ? ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಉಳಿಸಿಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದ ರಮೇಶ್ ಬಾಬು, ಬಗರ್ ಹುಕುಂ ಜಮೀನು ಹಂಚಿಕೆ ಹಗರಣದ ಕುರಿತು ಕಾಂಗ್ರೆಸ್ ಸರ್ಕಾರ ಸಮಗ್ರ ತನಿಖೆ ನಡೆಸಬೇಕು ಎಂದೂ ಆಗ್ರಹಿಸಿದರು.

ವಿರೋಧ ಪಕ್ಷದ ನಾಯಕರಾಗಿ ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕು ಎನ್ನುವುದು ಅಶೋಕಗೆ ಗೊತ್ತಿಲ್ಲ. ಪ್ರಬುದ್ಧತೆ, ಪಕ್ವತೆ ಇಲ್ಲದಂತೆ ವರ್ತಿಸುತ್ತಿದ್ದಾರೆ. ಯಾವುದೇ ವಿಚಾರದ ಬಗ್ಗೆ ಇವರಿಗೆ ಸ್ಪಷ್ಟತೆ ಇಲ್ಲವಾಗಿದೆ. ಅಸಮರ್ಥ ನಾಯಕನನ್ನು ಬಿಜೆಪಿ ವಿರೋಧ ಪಕ್ಷದ ನಾಯಕನನ್ನಾಗಿ ನೇಮಿಸಿದೆ ಎಂದು ದೂರಿದರು.

ಅಶೋಕ ಅವರು ಸಾರಿಗೆ ಸಚಿವರಾಗಿದ್ದಾಗ ರಾಷ್ಟ್ರೀಯ ನಗರ ನವೀಕರಣ ಮಿಷನ್ ಅಡಿಯಲ್ಲಿ 143 ಮಾರ್ಕೊಪೋಲೊ ಬಸ್‌ಗಳ ಖರೀದಿಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆಗೆ ಆದೇಶಿಸುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಾಬು ಒತ್ತಾಯಿಸಿದರು. ಆರೋಪಕ್ಕೆ ಸಂಬಂಧಿಸಿದಂತೆ ಅವರು ಇಲ್ಲಿಯವರೆಗೆ ಪ್ರತಿಕ್ರಿಯಿಸಿಲ್ಲ” ಎಂದು ಅವರು ಹೇಳಿದರು.

ಜಮೀನು ಡಿನೋಟಿಫಿಕೇಷನ್‌ಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಅವರು ಸಿಲುಕಿಕೊಂಡಿದ್ದರು ಆದರೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದ ನಂತರ ಭೂಮಿಯನ್ನು ಹಿಂದಿರುಗಿಸಲಾಯಿತು ಎಂದು ಬಾಬು ಆರೋಪಿಸಿದ್ದಾರೆ.

RELATED ARTICLES
- Advertisment -
Google search engine

Most Popular