ಬಾಗಲಕೋಟೆ: ಎಸ್ ಸಿ, ಎಸ್ ಟಿಗೆ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ, ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆದು ಬಿಜೆಪಿ ಪ್ರತಿಭಟನೆ ನಡೆಸಿದೆ.
ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ಹಣ ಸರ್ಕಾರ ತನ್ನ ಗ್ಯಾರಂಟಿಗಳಿಗೆ ಅನುಷ್ಠಾನಕ್ಕೆ ಬಳಸಿಕೊಂಡಿದೆ. 11,144 ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಮಾಜಿ ಸಚಿವ ಗೋವಿಂದ ಕಾರಜೋಳ, ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್, ಜಿಲ್ಲಾ ಪ್ರಧಾನಕಾರ್ಯದರ್ಶಿ ರಾಜುನಾಯ್ಕರ್ ಸೇರಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಮಾಜಿ ಸಚಿವ ಗೋವಿಂದ ಕಾರಜೋಳರಿಂದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೆಲೆ ಏರಿಕೆ ಜಾಸ್ತಿಯಾಗಿದೆ. ಮದ್ಯದ ದರವನ್ನು 20% ಏರಿಸಿದ್ದಾರೆ. ಕುಡುಕರು ಬೀದಿಗೆ ಇಳಿದರೆ ಸರ್ಕಾರ ಬೀಳುತ್ತೆ ಎಂದು ಹರಿಹಾಯ್ದಿದ್ದಾರೆ.
ಎಸ್ಸಿ, ಎಸ್ಟಿಗಳ ಮೀಸಲಾತಿ ಹಣವನ್ನು ಅವರ ಅಭಿವೃದ್ಧಿಗೆ ಬಳಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಎಉವ ಎಚ್ಚರಿಕೆ ನೀಡಿದ್ದಾರೆ.
