Wednesday, April 9, 2025
Google search engine

Homeಅಪರಾಧಲೈಂಗಿಕ ದೌರ್ಜನ್ಯ ಆರೋಪ: ವಿನಯ್ ಕುಲಕರ್ಣಿ ವಿರುದ್ಧ ಎಫ್​ಐಆರ್​ ದಾಖಲು

ಲೈಂಗಿಕ ದೌರ್ಜನ್ಯ ಆರೋಪ: ವಿನಯ್ ಕುಲಕರ್ಣಿ ವಿರುದ್ಧ ಎಫ್​ಐಆರ್​ ದಾಖಲು

ಬೆಂಗಳೂರು: ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ದೂರು ಆಧರಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ. ಬೆದರಿಕೆ ಹಾಕಿದ ಆರೋಪದಡಿ ವಿನಯ್ ಕುಲಕರ್ಣಿ ಆಪ್ತ ಅರ್ಜುನ್‌ ವಿರುದ್ಧವೂ ಪ್ರಕರಣ ದಾಖಲಾಗಿದೆ.

ತನ್ನ ವಿಡಿಯೋ ಹಾಗೂ ಮೊಬೈಲ್ ಸಂಭಾಷಣೆ ಪ್ರಸಾರ ಮಾಡಲು ಷಡ್ಯಂತರ ರೂಪಿಸಿದ್ದಾರೆ ಎಂದು ಶಾಸಕ ವಿನಯ್ ಕುಲಕರ್ಣಿ ಅವರು ಪ್ರತಿದೂರು ನೀಡಿದ್ದಾರೆ. ದೂರು ಆಧರಿಸಿ ಖಾಸಗಿ ಸುದ್ದಿ ವಾಹಿನಿ ಮತ್ತು ಸಂತ್ರಸ್ತೆ ವಿರುದ್ಧ ಸಂಜಯ ನಗರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಸಂತ್ರಸ್ತೆ ಅನೇಕ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರಿಗೆ ಬ್ಲಾಕ್ ಮೇಲ್​ ಮಾಡಿದ್ದಾಳೆ. ಸಂತ್ರಸ್ತೆ ಮೂಲಕ ನನ್ನ ವಿರುದ್ಧ ಸಂಚು ರೂಪಿಸಿ ಮಾನಹಾನಿ ಮಾಡಲಾಗಿದೆ ಎಂದು ಶಾಸಕ ವಿನಯ ಕುಲಕರ್ಣಿ ದೂರಿನಲ್ಲಿ ದಾಖಲಿಸಿದ್ದಾರೆ.

ನಾನು ಅವಳನ್ನು ಮುಟ್ಟಿದ್ದರೇ ನನ್ನ ತಾಯಿಯನ್ನು ಮುಟ್ಟಿದ ಹಾಗೆ ಎಂದು ಶಾಸಕ ವಿನಯ್​ ಕುಲಕರ್ಣಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಅವಳನ್ನು ಮುಟ್ಟಿದ್ದರೇ ನನ್ನ ತಾಯಿಯನ್ನು ಮುಟ್ಟಿದ ಹಾಗೆ. ನಿಮಗೆ ಇಷ್ಟೇ ಹೇಳುತ್ತೇನೆ. ವಿಡಿಯೋ ಕಾಲ್ ಮಾಡಿದ್ದರು. ಆ ವಿಡಿಯೋ ಕಾಲ್ ಇಟ್ಟುಕೊಂಡು ಇಷ್ಟೊಂದು ಆರೋಪ ಮಾಡಿದ್ದಾರೆ. ಇದು ಸತ್ಯಕ್ಕೆ ದೂರವಾಗಿದೆ ಎಂದರು.

ನಾನು ರಾಜಕೀಯದಲ್ಲಿ ಇಷ್ಟು ವರ್ಷಗಳ ಕಾಲ ಇದ್ದೇನೆ. ಕೆಲವರು ನನ್ನ ಹಿಂದೆ ಷಡ್ಯಂತರ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಹಲವಾರು ಬದಲಾವಣೆ ಆಗುವುದಿದೆ. ಹೀಗಾಗಿ ಈ ರೀತಿ ಮಾಡಿದ್ದಾರೆ. ನನ್ನ ವಿರುದ್ಧ ಒಂದು ಕೇಸ್ ನಡೆಯುತ್ತಿದೆ. ಆ ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಮಾಡಿಸುವ ಸಲುವಾಗಿ ಷಡ್ಯಂತ್ರ ಮಾಡಿದ್ದಾರೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular