Friday, April 11, 2025
Google search engine

Homeಬ್ರೇಕಿಂಗ್ ನ್ಯೂಸ್ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಫ್‌ಐಆರ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಫ್‌ಐಆರ್

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಗುರುವಾರ ತಡ ರಾತ್ರಿ ಪೋಕ್ಸೋ ಪ್ರಕರಣದಡಿ ಎಫ್‌ಐಆರ್ ದಾಖಲಾಗಿದೆ. ಬಾಲಕಿಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು ೩೫೪ (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಳೆದ ಫೆಬ್ರವರಿಯಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ ೨ ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

೫೩ ಮಂದಿ ವಿರುದ್ಧ ಮಹಿಳೆ ದೂರು: ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಉದ್ಯಮಿಗಳು ಸೇರಿದಂತೆ ಒಟ್ಟು ೫೩ ಮಂದಿ ವಿರುದ್ದ ಸಂತ್ರಸ್ತೆ ಬಾಲಕಿ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಟ ನಡೆಸುತ್ತಿರುವ ಯಡಿಯೂರಪ್ಪ ಅವರಿಗೆ ಈ ಕೇಸು ಸಂಕಷ್ಟ ತಂದೊಡ್ಡಲಿದೆ.

RELATED ARTICLES
- Advertisment -
Google search engine

Most Popular