Sunday, April 20, 2025
Google search engine

Homeಸ್ಥಳೀಯಸಿಎಂ ವಿರುದ್ಧ ಆರೋಪ ನಿರಾಧಾರ: ಪಾದಯಾತ್ರೆ ವಿರುದ್ಧ ಪುಷ್ಪಾ ಅಮರ್‌ನಾಥ್ ಕಿಡಿ

ಸಿಎಂ ವಿರುದ್ಧ ಆರೋಪ ನಿರಾಧಾರ: ಪಾದಯಾತ್ರೆ ವಿರುದ್ಧ ಪುಷ್ಪಾ ಅಮರ್‌ನಾಥ್ ಕಿಡಿ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಮಾಡುತ್ತಿರುವ ಆರೋಪಗಳು ನಿರಾಧಾರವಾಗಿದ್ದು, ಅವರದು ಬೋಗಸ್ ಪಾದಯಾತ್ರೆ, ರಾಜ್ಯದ ಜನರು ಇದನ್ನು ಸೂಕ್ಷ್ಮವಾಗಿ ನೋಡುತ್ತಿದ್ದು, ಮುಂದಿನ ದಿನಗಳಲ್ಲಿ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರ್‌ನಾಥ್ ಹೇಳಿದರು.

ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳ ನಾಯಕರು ಭ್ರಷ್ಟಾಚಾರದ ಪಿತಾಮಹರಾಗಿದ್ದು, ಶೀಘ್ರದಲ್ಲೇ ಅವರೆಲ್ಲರ ಹಗರಣಗಳು ಬಯಲಿಗೆ ಬರಲಿವೆ. ಬಿಜೆಪಿ ಆಡಳಿತದ ಅವಧಿಯಲ್ಲಿ ಪಿಎಸ್‌ಐ ಹಗರಣ, ಉಪನ್ಯಾಸಕರ ನೇಮಕಾತಿಯಲ್ಲಿ ಭ್ರಷ್ಟಾಚಾರ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅತಿ ಹೆಚ್ಚು ಹಗರಣಗಳು ನಡೆದಿವೆ. ಇಂತಹ ಭ್ರಷ್ಟರು ಪಾದಯಾತ್ರೆ ಮಾಡುತ್ತಿರುವುದು ಹಾಸ್ಯಾಸ್ಪದ ಎಂದರು.

ಸಿದ್ದರಾಮಯ್ಯ ಅವರು ಈ ರಾಜ್ಯ ಕಂಡ ಅಪರೂಪದ ನಾಯಕ, ಎಲ್ಲ ವರ್ಗದ ಜನರ ರಕ್ಷಕರು, ಪ್ರಾಮಾಣಿಕ ಮುಖ್ಯಮಂತ್ರಿ. ರಾಜ್ಯದಲ್ಲಿ ಪಾರದರ್ಶಕ ಆಡಳಿತ ನೀಡುತ್ತಿದ್ದಾರೆ. ಆದರೆ, ವಿನಾಕಾರಣ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಆಪಾದನೆ ಮಾಡಲಾಗುತ್ತಿದೆ.

ಪಾದಯಾತ್ರೆಯಲ್ಲಿ ಭಾಗವಹಿಸಿರುವ ಬಿಜೆಪಿ-ಜೆಡಿಎಸ್ ನಾಯಕರು ನೂರಾರು ಕೋಟಿ ರೂಪಾಯಿ ಮೌಲ್ಯದ ಬೇನಾಮಿ ಆಸ್ತಿಗಳನ್ನು ಮಾಡಿಕೊಂಡಿದ್ದು, ಅವುಗಳನ್ನು ಘೋಷಣೆ ಮಾಡಲಿ. ಸಿಎಂ ಸಿದ್ದರಾಮಯ್ಯ ಅವರ ಜನಪ್ರಿಯತೆ ನೋಡಿ ಸಹಿಸಿಕೊಳ್ಳಲಾಗದೆ ಈ ರೀತಿ ಆಪಾದನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡಿ ಈ ಬಿಜೆಪಿ ಜೆಡಿಎಸ್ ನವರೇ ಬೆತ್ತಲಾಗುತ್ತಿದ್ದಾರೆ. ಇವರು ಎಷ್ಟು ಪ್ರಾಮಾಣಿಕರು ಎಂಬುದನ್ನ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಇವರು ಏನೇ ಪ್ರಯತ್ನ ಮಾಡಿದರೂ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಏನೂ ಇಲ್ಲ ಎಂದರು.

ಎಲ್ಲರೂ ಸೇರಿ ಸಿಎಂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದು ಅವರ ವ್ಯರ್ಥ ಪ್ರಯತ್ನವೇ ಹೊರತು ಅದು ಯಾವುದೇ ಕಾರಣಕ್ಕೂ ಯಶಸ್ವಿ ಆಗಲ್ಲ. ಸಿಎಂ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಆಗಿರುವುದು ಬಿಜೆಪಿ ಕಾಲದಲ್ಲೇ. ಸಿದ್ದರಾಮಯ್ಯ ಅವರ ಕುಟುಂಬ ನಮಗೆ ನಿವೇಶನ ಕೊಡಿ ಅಂತ ಎಲ್ಲೂ ಕೇಳಿಲ್ಲ. ಅವರು ಎಲ್ಲೂ ತಪ್ಪು ಮಾಡಿಲ್ಲ. ಸಿದ್ದರಾಮಯ್ಯ ಅವರ ಏಳಿಗೆ ಸಹಿಸಲಾಗದೆ ಈ ರೀತಿ ಮಾಡುತ್ತಿದ್ದಾರೆ. ಇದರಿಂದ ಸಿಎಂ ಕುರ್ಚಿಗೆ ಯಾವುದೇ ಧಕ್ಕೆ ಆಗಲ್ಲ ಎಂದು ಅವರು ಹೇಳಿದರು.

RELATED ARTICLES
- Advertisment -
Google search engine

Most Popular