Friday, April 11, 2025
Google search engine

Homeರಾಜ್ಯಗ್ಯಾರಂಟಿ ಯೋಜನೆಗಳಿಂದಾಗಿ ಬಸ್ ಟಿಕೆಟ್ ದರ ಹೆಚ್ಚಳ ಆರೋಪ ಸುಳ್ಳು: ಸಚಿವ ಎನ್.ಎಸ್ ಬೋಸರಾಜು ಕಿಡಿ

ಗ್ಯಾರಂಟಿ ಯೋಜನೆಗಳಿಂದಾಗಿ ಬಸ್ ಟಿಕೆಟ್ ದರ ಹೆಚ್ಚಳ ಆರೋಪ ಸುಳ್ಳು: ಸಚಿವ ಎನ್.ಎಸ್ ಬೋಸರಾಜು ಕಿಡಿ

ಕೊಪ್ಪಳ: ಗ್ಯಾರಂಟಿ ಯೋಜನೆಗಳಿಂದಾಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಿರುವುದು ಸುಳ್ಳು ಆರೋಪ ಎಂದು ಸಚಿವ ಎನ್.ಎಸ್ ಬೋಸರಾಜು ಕಿಡಿಕಾರಿದ್ದಾರೆ.

ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಕೂಡಾ ಜನರ ತೆರಿಗೆ ಹಣವನ್ನೇ ನಾವು ಕೊಡುತ್ತಿದ್ದೇವೆ. ಕಳ್ಳತನ ಮಾಡಿ ಹಣ ಕೊಡೋಕೆ ಆಗುತ್ತಾ? ಡೀಸೆಲ್ ಬೆಲೆ ಹೆಚ್ಚಳವಾಗಿದೆ, ಖರ್ಚು ವೆಚ್ಚ ಹೆಚ್ಚಾಗಿದೆ. ಹೀಗಾಗಿ ಬಸ್ ದರ ಹೆಚ್ಚಳ ಮಾಡುತ್ತಿದ್ದಾರೆ ಎಂದು ಹೇಳಿದರು. ಸಂಪುಟ ಪುನಾರಚನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಖಾಲಿ ಇರುವ ಹುದ್ದೆ ಮಾತ್ರ ಭರ್ತಿ ಎಂದು ಸಿಎಂ ಹೇಳಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಬಗ್ಗೆ ಅಪಾರ್ಥ ಕಲ್ಪಿಸೋದು ಬೇಡ. ನಿನ್ನೆ ಕ್ಯಾಬಿನೆಟ್ ನಂತರ ಎಲ್ಲರನ್ನು ಊಟಕ್ಕೆ ಕರೆದಿದ್ದರು. ಬೆಂಗಳೂರಿನಲ್ಲಿ ಇದ್ದವರು ಊಟ ಮಾಡಿ ಬಂದಿದ್ದಾರೆ.

ಇನ್ನೂ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದರು. ಪ್ರಹ್ಲಾದ್ ಜೋಶಿ ಸಹೋದರನ ಮೇಲೆ ಆರೋಪ ಬಂದಿತ್ತು. ಹಾಗಂತ ಪ್ರಹ್ಲಾದ್ ಜೋಶಿ ರಾಜೀನಾಮೆ ನೀಡಿದ್ರಾ ಶೋಭಾ ಕರಂದ್ಲಾಜೆ ರಾಜೀನಾಮೆ ನೀಡಿದ್ರಾ? ಸರ್ಕಾರದ ಬಗ್ಗೆ ಮಾತನಾಡೋಕೆ ಬಿಜೆಪಿಯವರಿಗೆ ಏನು ಸಿಗ್ತಿಲ್ಲ. ಹೀಗಾಗಿ ಹೆಸರೇ ಇಲ್ಲದೇ ಇದ್ದರೂ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೇಳುತ್ತಿದ್ದಾರೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular