ಪಿರಿಯಾಪಟ್ಟಣ: ಮೈಸೂರು ಜಿಲ್ಲಾ ಹಾಲು ಒಕ್ಕೂಟ (ಮೈಮುಲ್) ಮಾಜಿ ಅಧ್ಯಕ್ಷ ಪಿ.ಎಂ.ಪ್ರಸನ್ನ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ೫ ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸದಂತೆ ಆದೇಶಿಸಿ ಹುಣಸೂರು ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅನುಸೂಯ ಅವರು ಆದೇಶ ಹೊರಡಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಹಾಲು ಉತ್ಪಾದಕರ ಸಹಕಾರ ಸಂಘದದಲ್ಲಿ ಹಣ ದುರುಪಯೋಗ ಹಾಗೂ ಅವ್ಯವಹಾರ ಕಂಡುಬಂದ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಹುಣಸೂರು ಉಪ ವಿಭಾಗ ಇವರು ಕರ್ನಾಟಕ ಸಹಕಾರ ಸಂಘಗಳ ಕಾಯಿದೆ ೧೯೫೯ ರ ಕಾಲಂ ೨೯ ಸಿಓ (೮) (ಬಿ)(ಸಿ)(ಡಿ)ಗಳನ್ನು ಉಲ್ಲಂಘಿಸಿರುವ ಪಿ.ಎಂ.ಪ್ರಸನ್ನ ಇವರನ್ನು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನವನ್ನು ರದ್ದುಗೊಳಿಸಿ ೫ ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಿರುವುದಾಗಿ ಆದೇಶ ಹೊರಡಿಸಿದ್ದಾರೆ.