ಬೆಂಗಳೂರು: ಮುಡಾದಿಂದ ಹೆಚ್ ಡಿ ದೇವೇಗೌಡರ ಕುಟುಂಬಕ್ಕೆ ೪೮ ಸೈಟುಗಳು ಹಂಚಿಕೆಯಾಗಿವೆ ಎಂದು ಯಡಿಯೂರಪ್ಪನವರು ಹೇಳಿದ್ದರು ಎಂದು ಶಾಸಕ ಪ್ರದೀಪ್ ಈಶ್ವರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೨೦೧೧ಮಾರ್ಚ್ ೧೭ರಂದು ವಿಧಾನಸಭೆಯಲ್ಲಿ ಆಗಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಮ್ಮ ಭಾಷಣದಲ್ಲಿ ಮುಡಾದಿಂದ ಹೆಚ್ ಡಿ ದೇವೇಗೌಡರ ಕುಟುಂಬಕ್ಕೆ ೪೮ಸೈಟುಗಳು ಮತ್ತು ಈಗ ಕೇಂದ್ರ ಸಚಿವರಾಗಿರುವ ಹೆಚ್ ಡಿ ಕುಮಾರಸ್ವಾಮಿಯವರಿಗೆ ೩೦೦ X ೨೦೦ಚದರ ಅಡಿ ಸೈಟು ಹಂಚಿಕೆಯಾಗಿರುವ ಸಂಗತಿಯನ್ನು ಹೇಳಿದ್ದರು ಎಂದು ತಿಳಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿಗೆ ಅಕ್ರಮವಾಗಿ ೧೪ ನಿವೇಶನನಗಳು ಹಂಚಿಕೆಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.