Tuesday, April 22, 2025
Google search engine

Homeರಾಜ್ಯಸುದ್ದಿಜಾಲಅಂಬೇಡ್ಕರ್ ಅವರ ಕೊಡುಗೆ ಅಪಾರ: ಶಿವಣ್ಣ ಬಿ.

ಅಂಬೇಡ್ಕರ್ ಅವರ ಕೊಡುಗೆ ಅಪಾರ: ಶಿವಣ್ಣ ಬಿ.

ರಾಮನಗರ: ಡಾ. ಬಿ.ಆರ್. ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ, ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ ನಮ್ಮೆಲ್ಲರ ಹೆಮ್ಮೆಯ ಸಂವಿಧಾನ ಶಿಲ್ಪಿ. ಬಾಬಾ ಸಾಹೇಬರ ಚಿಂತೆನೆಗಳು ಇಂದಿಗೂ ಯುವಜನೆತೆಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಉಪನ್ಯಾಸಕರಾದ ಶಿವಣ್ಣ ಬಿ. ಅವರು ತಿಳಿಸಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ, ಮಹಾಮಾನವತಾದಿ, ವಿಶ್ವಜ್ಞಾನಿ ಡಾ. ಬಿ.ಆರ್. ಅಂಬೇಡ್ಕರ್ ರವರ ೧೩೩ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸ್ವಾತಂತ್ರ್ಯ, ಸಮಾನತೆ ಹಾಗೂ ಭಾತೃತ್ವದ ಮೂಲಕ ಭಾರತದ ಪ್ರತಿಯೊಬ್ಬ ಪ್ರಜೆಗೂ ಸಮಾನ ಸ್ಥಾನಮಾನ ಕಲ್ಪಿಸಿಕೊಡಲು ಶ್ರಮಿಸಿ ಯಶಸ್ವಿಯಾದರು. ಡಾ. ಬಿ.ಆರ್. ಅಂಬೇಡ್ಕರ್ ಅವರು ಹಲವು ಕ್ಷೇತ್ರಗಳಲ್ಲಿ ಅದ್ಭುತ ಕೊಡುಗೆಗಳನ್ನು ನೀಡಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಭೌದ್ದಧರ್ಮದಗುರು ಬೌದಿಪಾಲ ಬಂತೇಜು ರವರುಗಳು ಬೌದ್ದ ದರ್ಮದ ಉಪನ್ಯಾಸ ಮತ್ತು ಆಶೀರ್ವಚನ ನೀಡಿದರು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಹಾಗೂ ಸಮುದಾಯದ ಮುಖಂಡರುಗಳಿಗೆ ಸನ್ಮಾನ ಮಾಡಲಾಯಿತು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಮೆರವಣಿಗೆಯು ಜಿಲ್ಲಾ ಕ್ರೀಡಾಂಗಣದಿಂದ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದವರಿಗೆ ವಿವಿಧ ಕಲಾತಂಡಗಳೊಂದಿಗೆ ಸಾಗಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸರೋಜ ದೇವಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ಉಪ ನಿರ್ದೇಕರಾದ ಶಿವಕುಮಾರ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ದಲಿತ ಸಮುದಾಯದ ಮುಖಂಡರುಗಳಾದ ಶಿವಕುಮಾರ್ ಸ್ವಾಮಿ, ಚಲುವರಾಜು, ಶಿವಲಿಂಗಯ್ಯ, ಶಿವಶಂಕರ್, ಡಾ. ಗೋವಿಂದಯ್ಯ, ಮಾಗಡಿ ಜಯರಾಮಯ್ಯ, ಗೋಪಿ, ಕಿರಣ್, ಗೋವಿಂದರಾಜು, ಕೊತ್ತಿಪುರ ಗೋವಿಂದರಾಜು, ರೈಡ್ ನಾಗರಾಜು, ಶಿವಪ್ರಕಾಶ್, ಅಂಜನಾಪುರ ವಾಸು, ಗುರುಮೂರ್ತಿ, ಹನುಮಯ್ಯ, ಕೋಟೆ ಕುಮಾರ್, ಜಗಧೀಶ್, ಹರೀಶ್ ಬಾಲು, ಕೃಷ್ಣಪ್ಪ, ಪುನೀತ್, ರಮೇಶ್ ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular