Friday, April 11, 2025
Google search engine

HomeUncategorizedರಾಷ್ಟ್ರೀಯಅಂಬೇಡ್ಕರ್ ಬರೆದ ಮೂಲ ಸಂವಿಧಾನದಲ್ಲಿ ಜಾತ್ಯಾತೀತ, ಸಮಾಜವಾದಿ ಪದಗಳು ಇರಲೇ ಇಲ್ಲ: ಯೋಗಿ ಆದಿತ್ಯನಾಥ್

ಅಂಬೇಡ್ಕರ್ ಬರೆದ ಮೂಲ ಸಂವಿಧಾನದಲ್ಲಿ ಜಾತ್ಯಾತೀತ, ಸಮಾಜವಾದಿ ಪದಗಳು ಇರಲೇ ಇಲ್ಲ: ಯೋಗಿ ಆದಿತ್ಯನಾಥ್

ಲಕ್ನೋ: ಸಮಾಜವಾದಿ ಮತ್ತು ಜಾತ್ಯತೀತ ಪದಗಳು ಭಾರತದ ಮೂಲ ಸಂವಿಧಾನದಲ್ಲಿ ಇರಲಿಲ್ಲ ಎಂದು ಹೇಳುವ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜಕೀಯ ವಾಗ್ವಾದಕ್ಕೆ ಎಡೆ ಮಾಡಿಕೊಟ್ಟಿದ್ದಾರೆ.

75ನೇ ಸಂವಿಧಾನ ದಿನಾಚರಣೆಯಂದೇ ಈ ಹೇಳಿಕೆ ನೀಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಸಮಾಜವಾದಿ ಮತ್ತು ಜಾತ್ಯತೀತ ಪದಗಳು ಭಾರತದ ಸಂವಿಧಾನದ ಮೂಲದಲ್ಲಿಲ್ಲ. ಸಂವಿಧಾನದ ಕತ್ತು ಹಿಸುಕಿದವರಿಗೆ ತಕ್ಕ ಪಾಠ ಕಲಿಸಲು ಸಾರ್ವಜನಿಕರು ಹಿಂಜರಿಯುವುದಿಲ್ಲ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಸಂವಿಧಾನ ದಿನಾಚರಣೆಯಂದು ಉತ್ತರ ಪ್ರದೇಶ ರಾಜಧಾನಿ ಲಕ್ನೋದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್ ಅವರು ಈ ಹೇಳಿಕೆ ನೀಡಿದ್ದಾರೆ.

ಸಂವಿಧಾನದಿಂದ ಜಾತ್ಯಾತೀತ ಮತ್ತು ಸಮಾಜವಾದಿ ಪದಗಳನ್ನು ತೆಗೆದುಹಾಕುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಸಮಯದಲ್ಲೇ ಆದಿತ್ಯನಾಥ್ ಈ ಹೇಳಿಕೆ ನೀಡಿದ್ದಾರೆ.

ಈ ಸಂಬಂಧ ಮಾತನಾಡಿರುವ ಸಿಎಂ ಆದಿತ್ಯನಾಥ್, ಭಾರತದ ಮೂಲ ಸಂವಿಧಾನದಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಪದಗಳೇ ಇರಲಿಲ್ಲ. ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರು ಬರೆದ ಸಂವಿಧಾನದಲ್ಲಿ “ಎರಡು ಪದಗಳು” ಇರಲಿಲ್ಲ. ಜಾತ್ಯತೀತ ಮತ್ತು ಸಮಾಜವಾದಿ ಪದಗಳು ಸಂವಿಧಾನದಲ್ಲಿ ಇರಲಿಲ್ಲ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕಾಂಗ್ರೆಸ್ ಈ ಪದಗಳನ್ನು ರಹಸ್ಯವಾಗಿ ಸೇರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಲ್ಲದೇ ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರು ಈ ದಿನವೇ ಏಕ್ ಭಾರತ್ ಶ್ರೇಷ್ಠ ಭಾರತಕ್ಕೆ ಅಡಿಪಾಯ ಹಾಕಿದ್ದಾರೆ. ಸಂವಿಧಾನ ರಚನಾ ಸಭೆಯ ಸಮಯದಲ್ಲಿ ನಡೆದ ಚರ್ಚೆಗಳು ಸಂಸ್ಥೆಗಳಲ್ಲಿ ನಡೆಯಬೇಕೆಂದು ನಾವು ಬಯಸುತ್ತೇವೆ. ಭಾರತದ ಸಂವಿಧಾನವು ನಮಗೆ ಹಕ್ಕುಗಳನ್ನು ನೀಡಿದೆ, ಪ್ರತಿಯೊಬ್ಬ ಪ್ರಜೆಗೂ ಮತದಾನದ ಹಕ್ಕನ್ನು ನೀಡಿದೆ ಎಂದು ಹೇಳಿದರು.

ಸೋಮವಾರ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ, ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದಿ’, ‘ಜಾತ್ಯತೀತ’ ಮತ್ತು ‘ಸಮಗ್ರತೆ’ ನಂತಹ ಪದಗಳನ್ನು ಸೇರಿಸಿರುವ 1976 ರ ತಿದ್ದುಪಡಿಯನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

1976 ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಸರ್ಕಾರವು ಪರಿಚಯಿಸಿದ 42 ನೇ ಸಾಂವಿಧಾನಿಕ ತಿದ್ದುಪಡಿಯ ಅಡಿಯಲ್ಲಿ ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದಿ’, ‘ಜಾತ್ಯತೀತ’ ಮತ್ತು ‘ಸಮಗ್ರತೆ’ ಪದಗಳನ್ನು ಸೇರಿಸಲಾಗಿತ್ತು.

RELATED ARTICLES
- Advertisment -
Google search engine

Most Popular