ಬೆಂಗಳೂರು : ಇತ್ತೀಚೆಗೆ ಐಟಿ ದಾಳಿಗೆ ಒಳಗಾಗಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆರ್ ಅಂಬಿಕಾಪತಿ(೭೦) ನಿಧನರಾಗಿದ್ದಾರೆ. ಹೃದಯಾಘಾತದಿಂದ ಸಂಜೆ ಮೃತಪಟ್ಟಿದ್ದು, ಹಲವು ದಿನಗಳಿಂದ ಅವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಅವರಿಗೆ ಹೃದಯಘಾತವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕಳೆದ ತಿಂಗಳು ಅಂಬಿಕಾಪತಿ ಅವರ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು.
ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.