ಮಂಗಳೂರು: ರೋಗಿಯನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಆಂಬುಲೆನ್ಸ್ ವಾಹನವೊಂದು
ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ವಗ್ಗ ಸಮೀಪ ಅಂಚಿಕಟ್ಟೆ ಎಂಬಲ್ಲಿ ನಡೆದಿದೆ.
ಚಾಲಕನನ್ನು ಗುರುವಾಯನಕೆರೆ ನಿವಾಸಿ ಶಬೀರ್ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಆಂಬುಲೆನ್ಸ್ ರಸ್ತೆ ಮಧ್ಯ ಪಲ್ಟಿಯಾಗಿದ್ದು ಚಾಲಕ ಶಬೀರ್ ಗಂಭೀರವಾಗಿ ಗಾಯಗೊಂಡಿದ್ದಾನೆ. ವಾಹನದಲ್ಲಿದ್ದ ರೋಗಿಯನ್ನು ಬದಲಿ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಶಬೀರ್ ಚಿಕಿತ್ಸೆಗೆ ಸ್ಪಂದಿಸದೇ ಚಾಲಕ ಮೃತಪಟ್ಟಿದ್ದಾರೆ.
