ಮೈಸೂರು: ಜಗದೀಶ್ ಶೆಟ್ಟರ್ ಗೆ ಅಮಿತ್ ಶಾ ಕರೆ ಮಾಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಿರಾಕರಿಸಿದ್ದು, ಯಾರು ಯಾರಿಗೆ ಕರೆ ಮಾಡಿದ್ರು, ಯಾಕೆ ಕರೆ ಮಾಡಿದ್ರು. ಇಂತಹ ಊಹಾಪೋಹದ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಗೃಹ ಲಕ್ಷ್ಮಿ ಯೋಜನೆ ಅನುಷ್ಟಾನ ಕೆಲಸದಲ್ಲಿದ್ದೇನೆ. ಬೆಂಗಳೂರು ಬಿಟ್ಟು ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಊಹಾಪೋಹದ ವಿಚಾರಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.
ರಾಹುಲ್ ಗಾಂಧಿ ಬರುತ್ತಿರುವುದು ರಾಜಕೀಯ ಉದ್ದೇಶದಿಂದಲ್ಲ. ಗ್ಯಾರೆಂಟಿ ಘೋಷಣೆ ಮಾಡಿದ್ದು ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ. ಅವರ ಸಮ್ಮುಖದಲ್ಲೇ ಅನುಷ್ಟಾನ ಮಾಡುವ ಉದ್ದೇಶದಿಂದ ಅವರನ್ನು ಕರೆಸಿದ್ದೇವೆ. ಗೃಹ ಲಕ್ಷ್ಮಿ ಯೋಜನೆ ಅನುಷ್ಟಾನ. ಕಾಂಗ್ರೆಸ್ ಶಕ್ತಿ ಪ್ರದರ್ಶನವಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಬಿಜೆಪಿ ನಾಯಕರು ಬೀದಿಗೆ ಬಂದಿದ್ದಾರೆ ಕಾಂಗ್ರೆಸ್ ಟ್ವೀಟ್ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಅವರನ್ನು ನಾಯಕರು ಅಂತ ಒಪ್ಪಿಕೊಂಡಿದ್ದಾರೆ. ಯಾವ ಕಾರಣಕ್ಕೆ ಅವರನ್ನು ಅಲ್ಲಿ ನಿಲ್ಲಿಸಿದ್ದಾರೆ ಗೊತ್ತಿಲ್ಲ. ತಿಳಿಯದೇ ಮಾತನಾಡುವುದು ತಪ್ಪು ಎಂದು ಹೇಳಿದರು.