Friday, April 11, 2025
Google search engine

HomeUncategorizedರಾಷ್ಟ್ರೀಯಅಮಿತ್ ಶಾ ಅಂಬೇಡ್ಕರ್ ಅಷ್ಟೆ ಅಲ್ಲ, ಎಲ್ಲಾ ಸ್ವತಂತ್ರ ಹೋರಾಟಗಾರರನ್ನು ಅವಮಾನಿಸಿದ್ದಾರೆ : ಪ್ರಿಯಾಂಕಾ ಗಾಂಧಿ...

ಅಮಿತ್ ಶಾ ಅಂಬೇಡ್ಕರ್ ಅಷ್ಟೆ ಅಲ್ಲ, ಎಲ್ಲಾ ಸ್ವತಂತ್ರ ಹೋರಾಟಗಾರರನ್ನು ಅವಮಾನಿಸಿದ್ದಾರೆ : ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಬೆಳಗಾವಿ : ಸಂಸತ್ ನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ಡಾ. ಬಿ ಆರ್ ಅಂಬೇಡ್ಕರ್ ಅವರ ಕುರಿತು ಅವಮಾನ ಮಾಡಿದ್ದ ಘಟನೆಯನ್ನು ಉಲ್ಲೇಖಿಸಿ, ಸಂಸದ ಪ್ರಿಯಾಂಕಾ ಗಾಂಧಿ ಎಂದು ಅಮಿತ್ ಶಾ ವಿರುದ್ಧವಾಗಿ ವಾಗ್ದಾಳಿ ನಡೆಸಿದ್ದು, ಕೇಂದ್ರ ಸಚಿವ ಅಮಿತ್ ಶಾ ಕೇವಲ ಅಂಬೇಡ್ಕರ್ ಅಷ್ಟೇ ಅಲ್ಲದೆ ಎಲ್ಲಾ ಸ್ವತಂತ್ರ ಹೋರಾಟಗಾರರನ್ನು ಅವಮಾನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇಂದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಗಾಂಧಿ ಭಾರತ ಸಮಾವೇಶ ಹಮ್ಮಿಕೊಂಡಿದ್ದು, ಸಮಾವೇಶದಲ್ಲಿ ಮಾತನಾಡಿದ ಅವರು, ಭಾರತದ ಹೆಮ್ಮೆಯ ಭೂಮಿ ಬೆಳಗಾವಿ ಪುಣ್ಯಭೂಮಿ ಬೆಳಗಾವಿ ಎಂದು ಪ್ರಿಯಾಂಕಾ ಗಾಂಧಿ ಭಾಷಣ ಆರಂಭಿಸಿದರು. ತಿಲಕ್ ಅವರು ತಮ್ಮ ಚಳುವಳಿಯನ್ನು ಬೆಳಗಾವಿಯಿಂದ ಆರಂಭಿಸಿದ್ದರು. ಗಾಂಧೀಜಿಯವರು ಬೆಳಗಾವಿ ಕಾಂಗ್ರೆಸ್ ಸಮಾವೇಶದ ಅಧ್ಯಕ್ಷರಾಗಿದ್ದರು. ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಕವಚವಾಗಿದೆ ಎಂದರು.

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದು, ಸ್ವತಂತ್ರ ಸಿಕ್ಕ ಬಳಿಕ ಹಲವು ಸರ್ಕಾರಗಳು ಅಧಿಕಾರಕ್ಕೆ ಬಂದಿವೆ. ಆದರೆ ಸಂಸತ್ತಿನಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಟೀಕಿಸಿರಲಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು ದಶಕಗಳು ಕಳೆದು ಹೋಗಿವೆ. 1947 ರಲ್ಲಿ ಸ್ವಾತಂತ್ರ್ಯ ಸಿಕ್ಕಿಲ್ಲ ಅಂತ ಹೇಳೋಕೆ ಸಾಧ್ಯನಾ? ಸಂಸತ್ತಿನಲ್ಲಿ ಸಂವಿಧಾನ ಅಂಬೇಡ್ಕರ್ ಅವರನ್ನು ಅಮಿತ್ ಶಾ ಟೀಕಿಸಿದ್ದಾರೆ. ಕೇವಲ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಅಷ್ಟೇ ಅಲ್ಲ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ಅಮಿತ್ ಶಾ ಅಪಮಾನಿಸಿದ್ದಾರೆ. ಎಂದು ಅಮಿತ್ ಶಾ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.

RELATED ARTICLES
- Advertisment -
Google search engine

Most Popular