ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ದೇಶದ ಜನರ ಕ್ಷಮೆಯನ್ನು ಯಾಚಿಸಬೇಕು ಎಂದು ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಎಸ್ ಸಿ ಘಟಕದ ಅಧ್ಯಕ್ಷ ಕಂಠಿಕುಮಾರ್ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಮಿತ್ ಶಾ ಅವರು ಅಂಬೇಡ್ಕರ್ ಅವರನ್ನು ಕುರಿತ ಬಿಜೆಪಿಯ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ ದೇಶದ ಮುಂದೆ ತೆರೆದಿಟ್ಟಿದ್ದಾರೆ. ಅವರ ಮಾತು ಅಂಬೇಡ್ಕರ್ ಅವರ ಬಗ್ಗೆ ಅವರಿಗಿರುವ ಅಸಹನೆಯನ್ನು ತೋರಿಸುತ್ತದೆ.
ಅಂಬೇಡ್ಕರ್ ಎಂಬುದು ಕೇವಲ ಹೆಸರಲ್ಲ ನಮ್ಮೆಲ್ಲರ ಉಸಿರು ಅಂತಹವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.