ಬೆಂಗಳೂರು: ಲೋಕಸಭಾ ಚುನಾವಣಾ ಪ್ರಚಾರ ಹಿನ್ನೆಲೆ ನಾಳೆ ಮಂಗಳವಾರ ನಗರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ.
ನಾಳೆ ಏ. ೨೩ರಂದು ನಗರಕ್ಕೆ ಆಗಮಿಸಲಿರುವ ಅವರು ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಾತ್ರ ಅವರು ರೋಡ್ ಶೋ ನಡೆಸಲಿದ್ದು, ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಲಿದ್ದಾರೆ.
ಹೊಸ ವೇಳಾಪಟ್ಟಿ ಪ್ರಕಾರ ಅವರು, ನಾಳೆ ಸಂಜೆ ೭ ಗಂಟೆಗೆ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್ ಶಾ ಅವರ ರೋಡ್ ಶೋ ೭.೩೦ಕ್ಕೆ ಆರಂಭವಾಗಲಿದೆ. ಬೊಮ್ಮನಹಳ್ಳಿ ಸರ್ಕಲ್ ನಿಂದ ಹೊರಟು ಐಐಎಂಬಿ ಬನ್ನೇರುಘಟ್ಟ ರಸ್ತೆ, ಬಿಳೇಕಹಳ್ಳಿವರೆಗೂ ರೋಡ್ ಶೋ ನಡೆಸಲಿರುವ ಅಮಿತ್ ಶಾ, ರಾತ್ರಿ ೮.೩೦ರ ವರೆಗೂ ಪ್ರಚಾರ ಕೈಗೊಳ್ಳಲಿದ್ದಾರೆ. ನಂತರ ಹೆಚ್‌ಎಎಲ್ ಗೆ ತೆರಳಿ ಅಲ್ಲಿಂದ ಕೇರಳಕ್ಕೆ ಪ್ರಯಾಣ ಬೆಳೆಸಲಿದ್ದಾರೆ.