Friday, April 18, 2025
Google search engine

Homeಅಪರಾಧಆಸ್ಪತ್ರೆಯಿಂದ ಬಂದು ಮನೆಯಲ್ಲಿ ಮತದಾನ ಮಾಡಿ ನಿಧನರಾದ ಮಾಜಿ ಸೈನಿಕ

ಆಸ್ಪತ್ರೆಯಿಂದ ಬಂದು ಮನೆಯಲ್ಲಿ ಮತದಾನ ಮಾಡಿ ನಿಧನರಾದ ಮಾಜಿ ಸೈನಿಕ

ಮಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (೮೩) ಅನಾರೋಗ್ಯದ ನಡುವೆಯೇ ಮತದಾನ ಕರ್ತವ್ಯ ಪೂರೈಸಿದವರು. ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ೮೫ ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಲಿ ಏ.೧೫ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದು, ಬುಧವಾರ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.

RELATED ARTICLES
- Advertisment -
Google search engine

Most Popular