Friday, April 18, 2025
Google search engine

Homeರಾಜ್ಯರಾಜ್ಯದಲ್ಲಿ ಇ – ಖಾತೆ ಸಮಸ್ಯೆ ನಿವಾರಣೆಗೆ ಸರ್ಕಾರದಿಂದ ಮಹತ್ವದ ಕ್ರಮ

ರಾಜ್ಯದಲ್ಲಿ ಇ – ಖಾತೆ ಸಮಸ್ಯೆ ನಿವಾರಣೆಗೆ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು  : ಸ್ಥಿರಾಸ್ತಿಗಳ ನೋಂದಣಿಗಾಗಿ, ಗ್ರಾಮಪಂಚಾಯಿತಿ ಮತ್ತು ಸ್ಥಳೀಯ ನಗರ ಸಂಸ್ಥೆಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಇ-ಖಾತೆಗಳನ್ನು ಶೀಘ್ರವಾಗಿ ವಿತರಿಸುವ ಕುರಿತು ಚರ್ಚಿಸಲು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದ ಕೊಠಡಿ ಸಂಖ್ಯೆ 222 ರಲ್ಲಿ ನಡೆದ ಸಭೆಯಲ್ಲಿ ಮಾನ್ಯ ಪೌರಾಡಳಿತ ಮತ್ತು ಹಜ್ ಸಚಿವರಾದ ಶ್ರೀ ರಹೀಂ ಖಾನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ, ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ಅಂಶಗಳು

1.ಸ್ಮಿರಾಸ್ತಿ ಸಂಬಂಧ ದಸ್ತಾವೇಜುಗಳ ನೋಂದಣಿಗಾಗಿ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಮತ್ತು ಇ-ಸ್ವತ್ತು ತಂತ್ರಾಂಶವನ್ನು 2014 ರಿಂದಲೇ ಸಂಯೋಜನೆಗೊಳಿಸಿದ್ದು, ನೋಂದಣಿಗಾಗಿ ಇ-ಖಾತಾ ಕಡ್ಡಾಯವಾಗಿರುತ್ತದೆ. ಹಾಗಾಗಿ, ಸಾರ್ವಜನಿಕರಿಗೆ ದಸ್ತಾವೇಜು ನೋಂದಣಿಗಾಗಿ ಇ-ಖಾತಾ ತುರ್ತಾಗಿ ವಿತರಿಸುವ ಕುರಿತು ಚರ್ಚಿಸಲಾಯಿತು.

2. ಮಂಗಳೂರು ಮತ್ತು ಇತರ ಕೆಲವು ಕಡೆ ವಿತರಿಸುತ್ತಿರುವ ಇ-ಆಸ್ತಿ ಖಾತೆಗಳಲ್ಲಿ ಸ್ಥಿರಾಸ್ತಿಯ ಅಳತೆಯ ವಿವರಗಳು ನಮೂದಾಗದೇ ಇರುವುದರಿಂದ, ಕಾವೇರಿ-2 ತಂತ್ರಾಂಶದಲ್ಲಿ ನೋಂದಣಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ.

3. ಕೃಷಿ ಜಮೀನು ಭೂ ಪರಿವರ್ತನೆ ನಂತರ ನಿವೇಶನ ಬಿಡುಗಡೆಗೊಳಿಸುವ ಪೂರ್ವದಲ್ಲಿ ಉದ್ಯಾನವನ (Park), CA ಸೈಟ್ ಮತ್ತು ರಸ್ತೆ ಜಮೀನುಗಳ ಪರಿತ್ಯಾಜನ ಪತ್ರ ನೀಡಲು ಅನುಕೂಲವಾಗುವಂತೆ ಇರುವ ಜಮೀನಿಗೆ ಇ-ಖಾತೆ ಮಂಜೂರು ಮಾಡುವ ಕುರಿತು ಚರ್ಚಿಸಲಾಯಿತು.

4. ಒಂದು ಸ್ಥಿರಾಸ್ಮಿಯನ್ನು ವಿಭಜಿಸಿ, ಮಾರಾಟ ಮಾಡುವುದಕ್ಕಾಗಿ, ನೋಂದಣಿಗಾಗಿ ಇ-ಖಾತೆಯನ್ನು ವಿಭಜಿಸಬೇಕಾಗಿರುತ್ತದೆ. ವಿಭಜಿತ ಖಾತೆ ಇಲ್ಲದಿದ್ದಲ್ಲಿ ದಸ್ತಾವೇಜು ನೋಂದಣಿಗೆ ಸಾಧ್ಯವಾಗುವುದಿಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು, ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಚರ್ಚಿಸಲಾಯಿತು.

5. ಮಹಾನಗರ ಪಾಲಿಕೆಗಳಲ್ಲಿ ನೀಡುತ್ತಿರುವ TDR ಗಳನ್ನು ಪುನರ್ ಉಪಯೋಗಿಸದಂತೆ ತಡೆಯಲು, TDR ಗಳಿಗೂ ಸಹ ಇ-ಖಾತೆಯನ್ನು ವಿತರಿಸುವ ಬಗ್ಗೆ ಚರ್ಚೆ ಮಾಡಲಾಯಿತು.

6. ಆಸ್ತಿ ನೋಂದಣಿಯ ನಂತರ XML ದತ್ತಾಂಶವನ್ನು ಇ ಸ್ವತ್ತಿಗೆ ಕಳುಹಿಸಿದ ನಂತರ ಖಾತೆ ಮಾಡುವ/ತಿರಸ್ಕರಿಸುವ ಬಗ್ಗೆ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ Delete Option ಬಳಸುತ್ತಿರುವ ಬಗ್ಗೆ ಚರ್ಚಿಸಲಾಯಿತು.

7. ಭೂಪರಿವರ್ತನೆಯ ನಂತರ ಸಂಬಂಧಿಸಿದ ಯೋಜನಾ ಪ್ರಾಧಿಕಾರದಿಂದ ಲೇಔಟ್ ಪ್ಲಾನ್‌ಗೆ ಅನುಮತಿ ಪಡೆಯದೆ ಜಮೀನನ್ನು ಮಾರಾಟ ಮಾಡಬೇಕಾಗಿದ್ದಲ್ಲಿ ಅಂತಹ ಆಸ್ತಿಗಳಿಗೆ ಉಂಡೆ ಖಾತೆ ಮಾಡುವುದು ಹಾಗೂ ಇಂತಹ ಜಮೀನುಗಳನ್ನು ಮಾರಾಟ ಮಾಡುವಾಗ ಮಾರ್ಗಸೂಚಿ ದರ ನಿಗಧಿಪಡಿಸುವ ಬಗ್ಗೆ ಚರ್ಚಿಸಲಾಯಿತು.

RELATED ARTICLES
- Advertisment -
Google search engine

Most Popular