Tuesday, April 22, 2025
Google search engine

Homeಅಪರಾಧಆಟೋಗಾಗಿ ಕಾಯುತ್ತಿದ್ದ ಅಪರಿಚಿತ ಮಹಿಳೆ ಕರೆದೊಯ್ದು ಅತ್ಯಾಚಾರವೆಸಗಿ ಕೊಲೆ: ಆರೋಪಿ ಬಂಧನ

ಆಟೋಗಾಗಿ ಕಾಯುತ್ತಿದ್ದ ಅಪರಿಚಿತ ಮಹಿಳೆ ಕರೆದೊಯ್ದು ಅತ್ಯಾಚಾರವೆಸಗಿ ಕೊಲೆ: ಆರೋಪಿ ಬಂಧನ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಯಲ್ಲಿ ಮತ್ತಷ್ಟು ಮಾಹಿತಿ ಹೊರಬಿದ್ದಿದ್ದು, ಫೆ.20ರ ಮುಂಜಾನೆ ಆಟೋಗಾಗಿ ಕಾಯುತ್ತಿದ್ದ ಅಪರಿಚಿತ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂಬುದು ಗೊತ್ತಾಗಿದೆ.

 ಮುಬಾರಕ್ (28) ಎಂಬ ಆಟೋ ಚಾಲಕ ಅತ್ಯಾಚಾರವೆಸಗಿ ಕೊಂದಿದ್ದ.

ಶಾಂತಿನಗರದ ಜನತಾಕೋ ಆಪರೇಟಿವ್ ಕಟ್ಟಡದ ಬಳಿ ಶವ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಮಹಿಳೆ ಕಟ್ಟಡದಿಂದ ಬಿದ್ದು ಮೃತಪಟ್ಟಂತೆ ಕಾಣುತ್ತಿತ್ತು. ಮರಣೋತ್ತರ ಪರೀಕ್ಷೆ ವೇಳೆ ಅತ್ಯಾಚಾರವೆಸಗಿ ಕೊಂದಿರುವುದು ದೃಢವಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆಟೋ ಚಾಲಕ ಮುಬಾರಕ್ ಬಂಧಿಸಿದ್ದು, ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.

ಮುಂಜಾನೆ ಮಾರ್ಕೆಟ್ ಬಳಿ ನಿಂತಿದ್ದ ಮಹಿಳೆಯನ್ನು ಸಂಪಂಗಿರಾಮನಗರಕ್ಕೆ ಆಟೋ ಚಾಲಕ ಕರೆತಂದಿದ್ದಾನೆ. ಜನತಾ ಕೋ ಆಪರೇಟಿವ್ ಕಟ್ಟಡದ ಮೊದಲ ಮಹಡಿಗೆ ಕರೆದೊಯ್ದಿದ್ದ. ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕಟ್ಟಡದಿಂದ ತಳ್ಳಿ ಕೊಲೆ ಮಾಡಿದ್ದಾನೆ. ಹತ್ಯೆಗೀಡಾಗಿರುವ ಮಹಿಳೆಯ ಗುರುತನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಸಂಪಂಗಿರಾಮನಗರ ಠಾಣೆ ಪೊಲೀಸರಿಂದ ತನಿಖೆ ಮುಂದುವರೆದಿದೆ.

RELATED ARTICLES
- Advertisment -
Google search engine

Most Popular