Monday, April 7, 2025
Google search engine

Homeಅಪರಾಧಆಂಧ್ರಪ್ರದೇಶದಲ್ಲಿ ಭೂಕುಸಿತ: ನಾಲ್ವರು ದುರ್ಮರಣ

ಆಂಧ್ರಪ್ರದೇಶದಲ್ಲಿ ಭೂಕುಸಿತ: ನಾಲ್ವರು ದುರ್ಮರಣ

ಅಮರಾವತಿ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಭಾರೀ ಮಳೆಯ ಪರಿಣಾಮ ಉಂಟಾದ ಭೂಕುಸಿತದಲ್ಲಿ ಐವರು ಸಾವನ್ನಪ್ಪಿದ್ದಾರೆ.

ಮೊಘಲ್‍ರಾಜಪುರಂ ಕಾಲೋನಿಯ ಸುನ್ನಪುಬಟ್ಟಿ ಎಂಬಲ್ಲಿ ಭೂಕುಸಿತ ಸಂಭವಿಸಿದೆ. ಗುಡ್ಡದ ಮೇಲಿಂದ ಭಾರೀ ಗಾತ್ರದ ಕಲ್ಲುಗಳು ಮನೆಗಳ ಮೇಲೆ ಬಿದ್ದಿವೆ. ಒಂದು ಮನೆ ಸಂಪೂರ್ಣ ನಾಶವಾಗಿದ್ದು, ಒಳಗಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಕನಿಷ್ಠ ಮೂರು ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಮೇಘನಾ (25), ಬೋಲೆಂ ಲಕ್ಷ್ಮಿ (49), ಲಾಲು (20) ಮತ್ತು ಅನ್ನಪೂರ್ಣ (55) ಎಂದು ಗುರುತಿಸಲಾಗಿದೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಗುಡ್ಡಗಾಡು ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

RELATED ARTICLES
- Advertisment -
Google search engine

Most Popular