ಹೊಸೂರು: ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಆದಷ್ಟು ಬೇಗ ಘೋಷಣೆ ಮಾಡುವಂತೆ ಮಾಡುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಕೆಪಿಸಿಸಿ ರಾಜ್ಯ ಓಬಿಸಿ ಕಾರ್ಯದರ್ಶಿ ಕಂಚಿನಕರೆ ಕೆ.ಪಿ.ಯೋಗೇಶ್ ಮನವಿ ಮಾಡಿದ್ದಾರೆ.
ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಮಾಡದೇ ಸಾರ್ವಜನಿಕರ ಕೆಲಸ ಮತ್ತು ಅಭಿವೃದ್ದಿ ಕುಂಠಿತವಾಗಿದ್ದು, ಸರ್ಕಾರ ಇದನ್ನು ಗಮನದಲ್ಲಿ ಇಟ್ಟುಕೊಂಡು ಆದಷ್ಟು ಬೇಗ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಘೋಷಣೆ ಮಾಡಲಿ ಎಂದು ಮನವಿ ಮಾಡಿದ್ದಾರೆ.