ರಾಮನಗರ: ವೇಗವಾಗಿ ಬಂದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸಾವಿಗೀಡಾಗಿಮೂರು ಮಂದಿ ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮದ ಸಮೀಪ ಇರುವ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇ ನಲ್ಲಿ ಸಂಭವಿಸಿದೆ.
ಮಂಜೇಶ್ (28) ಮೃತ ದುರ್ದೈವಿ. ಈತ ಮದ್ದೂರು ತಾಲೂಕಿನ ಡಣಾಯಕನ ಪುರ ಗ್ರಾಮದ ನಿವಾಸಿ.
ಸಂಚಾರ ವ್ಯತ್ಯಯ: ರಸ್ತೆ ಅಪಘಾತದ ಹಿನ್ನೆಲೆಯಲ್ಲಿ ಬೆಂ-ಮೈ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಭಾನುವಾರವಾಗಿರುವ ಕಾರಣ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿತ್ತು. ಅಪಘಾತದಿಂದಾಗಿ ಕೆಲಕಾಲ ಟ್ರಾಫಿಕ್‌ಜಾಮ್ ಆಗಿ ಪ್ರಯಾಣಿಕರು ಪರದಾಡುವಂತಾಗಿತ್ತು. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷ ಕೃಷ್ಣ ಮತ್ತು ಸಿಬ್ಬಂದಿ ತೆರಳಿ ಸಂಚಾರ ಸುಗಮ ಗೊಳಿಸಿದರು. ಈ ಸಂಬಂಧ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.