Friday, April 4, 2025
Google search engine

Homeಅಪರಾಧಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ನಿವಾಸಿ ಮಹಾದೇವಿ (21) ಮೃತ ಬಾಣಂತಿ. ಮಹಾದೇವಿ ಅವರಿಗೆ ಜನವರಿ 25ರಂದು ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು.

ಸಿಸೇರಿಯನ್ ಬಳಿಕ ಬಾಣಂತಿ ಮಹಾದೇವಿ ಆರೋಗ್ಯವಾಗಿದ್ದರು. ಐದು ದಿನಗಳ ಬಳಿಕ ಮಹಾದೇವಿ ಅವರಿಗೆ ಇನ್ಫೆಕ್ಷನ್ ಆಗಿದೆ ಎಂದು ವೈದ್ಯರು ಕುಟುಂಬಸ್ಥರ ಬಳಿ ಹೇಳಿದ್ದಾರೆ. ಶುಕ್ರವಾರ ರಾತ್ರಿ ತೀವ್ರ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಮಹಾದೇವಿ ಮೃತಪಟ್ಟಿದ್ದಾರೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಕಳೆದ ವರ್ಷ ಬಿಮ್ಸ್ ಆಸ್ಪತ್ರೆಯಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದಾರೆ. 2024ರ ನವೆಂಬರ್​ 9 ರಂದು ಜಿಲ್ಲಾ ಆಸ್ಪತ್ರೆಯಲ್ಲಿ 14 ಬಾಣಂತಿಯರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಇವರಲ್ಲಿ ಒಂಬತ್ತು ಬಾಣಂತಿಯರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಕಂಡುಬಂದಿತ್ತು. ಏನಾಯಿತು ಅಂತ ಗಮನಿಸುವಷ್ಟರಲ್ಲಿ ಇಬ್ಬರು ಬಾಣಂತಿಯರು ಮೃತಪಟ್ಟಿದ್ದರು. ಬಳಿಕ ಮೂವರು ಮೃತಪಟ್ಟಿದ್ದರು. ಬಾಣಂತಿಯರ ಸಾವಿಗೆ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂದು ತನಿಖಾ ತಂಡ ಮಾಹಿತಿ ನೀಡಿತ್ತು.

RELATED ARTICLES
- Advertisment -
Google search engine

Most Popular