ಮೈಸೂರು : ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರಿಗೆ ತೀವ್ರ ಸಂಕಷ್ಟ ಎದುರಾಗಿದ್ದು, ಕಳೆದ ಎರಡು ದಿನಗಳ ಹಿಂದೆ ಪತ್ನಿ ಪಾರ್ವತಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.ಇದೀಗ ಪಾರ್ವತಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಮತ್ತೊಂದು ದೂರು ನೀಡಲಾಗಿದೆ.
ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ದಾಖಲಿಸಿದ್ದಾರೆ.ಮೈಸೂರಿನ ಕೈಗಾರಿಕಾ ಪ್ರದೇಶದಲ್ಲಿ ೨೦೨೩ರ ನವೆಂಬರ್‌ನಲ್ಲಿ ೧.೮೪ ಕೋಟಿ ರೂ. ಹಣ ನೀಡಿ ಖರೀದಿಸಿರುವ ೨೦ ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಹಣದ ಮೂಲ ಪತ್ತೆ ಹಚ್ಚಿ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಇಆ ಗೆ ದೂರು ನೀಡಿದ್ದಾರೆ.
ಕೆಆರ್‌ಎಸ್ ರಸ್ತೆಯಲ್ಲಿ ೨೦ ಗುಂಟೆ ಜಮೀನು ಖರೀದಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಮೊದಲ ಪ್ರಕರಣದಲ್ಲಿ ಕೆಸರೆಯ ಸರ್ವೇ ನಂಬರ್ ೪೬೨ ಮತ್ತು ೪೬೪ರ ೩.೧೬ ಎಕರೆ ಭೂಮಿ ಹಾಗೂ ೧೪ ಸೈಟ್ ವಿಚಾರದಲ್ಲಿ ದಾಖಲೆ ಬಿಡುಗಡೆ ಮಾಡಿದ್ದರು. ಹೀಗಾಗಿ ವೈಯಕ್ತಿಕ ಮಾಹಿತಿಗಳ ಜತೆಗೆ ಅಗತ್ಯ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಗಂಗರಾಜು ಇಆ ವಿಚಾರಣೆಗೆ ಹಾಜರಾಗಲಿ ದ್ದಾರೆ.