ಬೆಂಗಳೂರು: ಮುಡಾ ಹಗರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಅರ್ಕಾವತಿ ಬಡಾವಣೆಯ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ಅರ್ಕಾವತಿ ಲೇಔಟ್ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ನಿವೇಶನಗಳ ಮಾಲೀಕರಾದ ಎಂ.ಎಸ್.ಶಿವಲಿಂಗಪ್ಪ, ಎಂ.ಚಂದ್ರಶೇಖರನ್, ಕೆ.ರಾಮಚಂದ್ರಯ್ಯ ಮತ್ತು ಡಾ.ವೆಂಕಟಕೃಷ್ಣಪ್ಪ ಎಂಬುವರು ಸಿಎಂ ಸಿದ್ದರಾಮಯ್ಯ, ಈ ಹಿಂದೆ ಬಿಡಿಎ ಆಯುಕ್ತರಾಗಿದ್ದ ಶ್ಯಾಂಭಟ್ ಮತ್ತು ಭೂಸ್ವಾಧೀನಾಧಿಕಾರಿ ಬೋರಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಅರ್ಕಾವತಿ ಲೇಔಟ್‌ನ ನಿವೇಶನಗಳ ಹಂಚಿಕೆಯಲ್ಲಿಅಕ್ರಮ ನಡೆದಿದ್ದು, ವಶಪಡಿಸಿಕೊಂಡಿರುವ ಜಾಗವು ಭೂಗಳ್ಳರ ಪಾಲಾಗುತ್ತಿದೆ. ಇದರಿಂದ ಅಸಲಿ ಫಲಾನುಭವಿ ನಿವೇಶನದಾರರಿಗೆ ತೊಂದರೆಯಾಗಿದೆ. ಮತ್ತೊಂದೆಡೆ ಲೇಔಟ್‌ಗೆ ಜಮೀನು ಕೊಟ್ಟ ಮಾಲೀಕರಿಗೂ ವಂಚನೆಯಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.