ಮಂಡ್ಯ: ಸ್ಟೋನ್ ಕ್ರಷರ್ ರೈಟರ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದ ಮೇಲೆ ರೈತ ಸಂಘ(ರೈತಬಣ)ದ ಅಧ್ಯಕ್ಷ ಇಂಗಲಗುಪ್ಪೆ ಕೃಷ್ಣ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.

ಶ್ರೀರಂಗಪಟ್ಟಣ ತಾಲೂಕಿನ ಅಲ್ಪಹಳ್ಳಿ ಗ್ರಾಮದಲ್ಲಿ ಪ್ರಭಾವತಿ ಸ್ಟೋನ್ ಕ್ರಷರ್ ನ ರೈಟರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ ಆರೋಪದ ಮೇಲೆ ರಾಜ್ಯ ರೈತ ಸಂಘ(ರೈತಬಣ)ದ ಅಧ್ಯಕ್ಷ ಇಂಗಲಗುಪ್ಪೆ ಕೃಷ್ಣ ಮತ್ತು ಅವರ ಸಹಚರರ ವಿರುದ್ಧ ರೈಟರ್ ಸೋಮಯ್ಯ ದೂರು ದಾಖಲಿಸಿದ್ದಾರೆ.
ದೂರು ಆಧರಿಸಿ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.