Monday, April 21, 2025
Google search engine

Homeಅಪರಾಧಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಹೊತ್ತಿ ಉರಿದ ಅಗರಬತ್ತಿ ಕಾರ್ಖಾನೆ

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಹೊತ್ತಿ ಉರಿದ ಅಗರಬತ್ತಿ ಕಾರ್ಖಾನೆ

ಬೆಂಗಳೂರು: ಆನೇಕಲ್‌ನ ಅತ್ತಿಬೆಲೆ ಪಟಾಕಿ ಬೆಂಕಿ ದುರಂತ ಮಾಸುವ ಮುನ್ನವೇ ಮತ್ತೇ ಇಂತಹದೇ ಘಟನೆ ನಡೆದಿದೆ. ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಿಂದ ಅಗರಬತ್ತಿ ಫ್ಯಾಕ್ಟರಿಗೆ ಹೊತ್ತಿ ಉರಿದ ಘಟನೆ ಜೋಗುಪಾಳ್ಯದ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ. ಅವಘಡದಿಂದಾಗಿ ಫ್ಯಾಕ್ಟರಿಯಲ್ಲಿದ್ದ ಕೆಮಿಕಲ್ ಲಿಕ್ವಿಡ್ ಹರಿದು ರಸ್ತೆಗೂ ಬೆಂಕಿ ಹಬ್ಬಿದ್ದು, ೮ ಬೈಕ್ ಅಗ್ನಿಗಾಹುತಿಯಾಗಿವೆ.

ಸ್ಥಳಕ್ಕೆ ದೌಡಾಯಿಸಿದ ಎರಡು ಅಗ್ನಿಶಾಮಕ ವಾಹನದ ಸಿಬ್ಬಂದಿ ಬೆಂಕಿ ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಉಂಟಾಗಲು ಕಾರಣ ಏನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ಫ್ಯಾಕ್ಟರಿಯಲ್ಲಿದ್ದ ಕೆಮಿಕಲ್ ಲಿಕ್ವಿಡ್ ರಸ್ತೆಗೆ ಹರಿದಿದ್ದರಿಂದ ಬೆಂಕಿ ರಸ್ತೆಗೂ ಹಬ್ಬಿತ್ತು. ಇದರಿಂದಾಗಿ ಫ್ಯಾಕ್ಟರಿ ಎದುರು ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ ತಗುಲಿದೆ. ಪರಿಣಾಮವಾಗಿ ರಾಯಲ್ ಎನ್‌ಫೀಲ್ಡ್, ಪಲ್ಸರ್, ಹೊಂಡಾ ಆಕ್ಟಿವಾ ಸ್ಕೂಟರ್ ಸೇರಿದಂತೆ ೮ ದ್ವಿಚಕ್ರ ವಾಹನಗಳು ಅಗ್ನಿಗಾಹುತಿಯಾಗಿವೆ.

ಮೇಲಿಂದ ಮೇಲೆ ಬೆಂಕಿ ಅವಘಡ, ಸಾವಿನಿಂದ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಅವರವರ ಅಧಿಕಾರ ವ್ಯಾಪ್ತಿಯಲ್ಲಿರುವ ಪಟಾಕಿ ಅಂಗಡಿ, ಗೋದಾಮುಗಳನ್ನು ಪರಿಶೀಲನೆ ಮಾಡುತ್ತಿದ್ದು, ಬೆಂಕಿ ಸಂಭವಿಸುವಂತಹ ಅಂಗಡಿಗಳಿಗೆ ಎಚ್ಚರಿಕೆ ಕೂಡ ನೀಡಲಾಗಿದೆ. ಅತ್ತಿಬೆಲೆ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬದವರಿಗೆ, ಗಾಯಗೊಂಡವರಿಗೆ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ತಮಿಳುನಾಡು ಸರ್ಕಾರ ಪರಿಹಾರ ಘೋಷಿಸಿದೆ. ಜತೆಗೆ ಘಟನೆ ಬಗ್ಗೆ ತೀವ್ರ ತನಿಖೆ ಕೂಡ ನಡೆಯುತ್ತಿದೆ. ಇನ್ನು ದುರಂತಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯಿಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular