ಉತ್ತರ ಪ್ರದೇಶ: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಶನಿವಾರ (ಜನವರಿ 25) ಬೆಳಿಗ್ಗೆ ಮತ್ತೆ ಬೆಂಕಿ ಅವಘಡ ಸಂಭವಿಸಿದೆ.
ಇಲ್ಲಿನ ಮುಖ್ಯರಸ್ತೆಯ ಸೆಕ್ಟರ್-2ರ ಬಳಿ ನಿಲ್ಲಿಸಿದ್ದ ಎರಡು ಕಾರುಗಳು ಬೆಂಕಿಗಾಹುತಿಯಾಗಿವೆ. ಮಾಹಿತಿ ಸಿಕ್ಕಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ತಂಡ ಬೆಂಕಿ ನಂದಿಸಿ ಹೆಚ್ಚಿನ ಅವಘಡವನ್ನು ತಪ್ಪಿಸಿದೆ, ಈ ಅವಘಡದಲ್ಲಿ ಎರಡೂ ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಸುತ್ತಮುತ್ತಲಿನ ವಾಹನಗಳನ್ನು ತೆರವುಗೊಳಿಸಲಾಯಿತು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಂದು ಸಿಎಂ ಯೋಗಿ ಪ್ರಯಾಗ್‌ರಾಜ್‌ಗೆ ಭೇಟಿ
ಇಂದು ಬೆಳಗ್ಗೆ 11.30ಕ್ಕೆ ಸಿಎಂ ಯೋಗಿ ಪ್ರಯಾಗರಾಜ್ ತಲುಪಲಿದ್ದಾರೆ. ಇಲ್ಲಿ ನಡೆಯುವ ಮಹಾಸಭಾದಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ. ಇದಾದ ನಂತರ ಸಿಎಂ ಕಲ್ಯಾಣದಾಸ್ ಜಿ ಮಹಾರಾಜ್ ಅವರನ್ನು ಶ್ರೀ ಕಲ್ಯಾಣ್ ಸೇವಾ ಆಶ್ರಮದಲ್ಲಿ ಭೇಟಿಯಾಗಲಿದ್ದಾರೆ. ನಂತರ ವಿಶ್ವಹಿಂದೂ ಪರಿಷತ್ತಿನ ಶಿಬಿರದಲ್ಲಿ ನಡೆಯುವ ಸಮಾವೇಶದಲ್ಲಿ ಸಂತರು ಪಾಲ್ಗೊಳ್ಳಲಿದ್ದಾರೆ.