Saturday, April 19, 2025
Google search engine

Homeಅಪರಾಧಇಂದು ಮತ್ತೊಬ್ಬ ನಕ್ಸಲ್ ಕೋಟೆಹೊಂಡ ರವಿ ಶರಣಾಗತಿ

ಇಂದು ಮತ್ತೊಬ್ಬ ನಕ್ಸಲ್ ಕೋಟೆಹೊಂಡ ರವಿ ಶರಣಾಗತಿ

ಚಿಕ್ಕಮಗಳೂರು : ಕಳೆದ ಕೆಲವು ದಿನಗಳ ಹಿಂದೆ ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ 6 ಜನ ನಕ್ಸಲರು ಸಿಎಂ ಸಿದ್ದರಾಮಯ್ಯ ಎದುರು ಶರಣಾಗಿದ್ದರು. ಇದೀಗ ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವಿ ಅಲಿಯಾಸ್ ರವೀಂದ್ರ ನೆಮ್ಮಾರ್ ಕಳೆದ ರಾತ್ರಿ ಶೃಂಗೇರಿಯಲ್ಲಿ ಶರಣಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತದ ಎದುರು ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗಷ್ಟೆ ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಾಣಾಗಿದ್ದರು. ಆದರೆ ಕೋಟೆಹೊಂಡ ರವಿ ಮಾತ್ರ ಭೂಗತವಾಗಿದ್ದರು. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು. ಕಳೆದ ರಾತ್ರಿ ಶೃಂಗೇರಿಯ ಅರಣ್ಯ ಐಬಿಯಲ್ಲಿ ಕೋಟೆಹೊಂಡ ರವಿ ಅವರು ಶರಣಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ಹೊತ್ತಿಗೆ ಅವರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ ಎಂದು ಪ್ರಗತಿಪರ ಹೋರಾಟಗಾರ ಕೆ.ಎಲ್.ಅಶೋಕ್‌ ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular