ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ, ಬೆಂಗಳೂರಿನ ಸುಮಾರು 40ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಹುಸಿ ಬಾಂಬ್ ಇ-ಮೇಲ್ ಸಂದೇಶ ಬಂದಿತ್ತು. ಇದೀಗ ಇಂದು ಬೆಂಗಳೂರಿನ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದೆ.
ಬೆಂಗಳೂರಿನ ವರ್ತೂರು ಸಮೀಪದ ಕ್ರೀಸಲಿಸ್ ಹೈ ಶಾಲೆಗೆ ಬೆದರಿಕೆ ವಿಮಲ್ ಸಂದೇಶ ಬಂದಿದ್ದು ಮುಂಜಾಗ್ರತೆಯಿಂದ ಶಾಲಾ ಆಡಳಿತ ಮಂಡಳಿ ಮಕ್ಕಳನ್ನು ಮನೆಗೆ ಕಳುಹಿಸಿದ್ದಾರೆ ತಕ್ಷಣ ಶಾಲೆಗೆ ವರ್ತೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೇ ನಡೆಸುತ್ತಿದ್ದಾರೆ. ಅಲ್ಲದೆ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.