Monday, December 2, 2024
Google search engine

Homeರಾಜಕೀಯಶೋಕಾಸ್‌‍ ನೋಟಿಸ್‌‍ಗೆ ಉತ್ತರ ನೀಡುತ್ತೇನೆ : ಯತ್ನಾಳ್‌

ಶೋಕಾಸ್‌‍ ನೋಟಿಸ್‌‍ಗೆ ಉತ್ತರ ನೀಡುತ್ತೇನೆ : ಯತ್ನಾಳ್‌

ಬೆಂಗಳೂರು: ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಸದಸ್ಯರು ಶೋಕಾಸ್‌‍ ನೋಟಿಸ್‌‍ ನೀಡಿರುವ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ರಾಜ್ಯ ಬಿಜೆಪಿಯ ಸ್ಥಿತಿಯ ಬಗ್ಗೆ ಹೈಕಮಾಂಡ್‌ಗೆ ವಿವರ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌‍ಗೆ ಉತ್ತರ ನೀಡುತ್ತೇನೆ. ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಅವರ ಮುಂದೆ ಪ್ರಸ್ತುತಪಡಿಸುತ್ತೇನೆ.

ಹಿಂದುತ್ವದ ಪರ ಹೋರಾಟ, ಭ್ರಷ್ಟಾಚಾರದ ವಿರುದ್ಧದ ಹೋರಾಟ, ವಕ್ಫ್‌‍ ಸಂಬಂಧಿತ ಸಮಸ್ಯೆಗಳು ಮತ್ತು ವಂಶ ರಾಜಕಾರಣದ ವಿರುದ್ಧದ ಹೋರಾಟ ಸಂಬಂಧ ನನ್ನ ಬದ್ಧತೆ ಅಚಲವಾಗಿ ಇರಲಿದೆ ಎಂದು ಯತ್ನಾಳ್‌ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಸತತ ಹೇಳಿಕೆಗಳನ್ನು ನೀಡುವುದರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್‌‍ ನೋಟಿಸ್‌‍ ನೀಡಿದೆ.

RELATED ARTICLES
- Advertisment -
Google search engine

Most Popular