ಮಂಡ್ಯ: ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಹಿನ್ನಲೆ ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ಮಂಡ್ಯದ ಫ್ಯಾಕ್ಟರಿ ಸರ್ಕಲ್ ವೃತ್ತದಲ್ಲಿ ಜಾಗೃತಿ ಜಾಥಾದ ಮೂಲಕ ಅರಿವು ಕಾರ್ಯಕ್ರಮ ನಡೆಸಲಾಯಿತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ ಜಾಗೃತಿ ಜಾಥಾಗೆ ಚಾಲನೆ ನೀಡಿದರು.
ಬಾಲ್ಯ ಕಲಿಕೆಗಾಗಿ, ಬಾಲ್ಯ ಹಣಗಳಿಕೆಗಲ್ಲ. ಬಾಲ ಕಾರ್ಮಿಕರನ್ನ ರಕ್ಷಣೆ ಮಾಡಿ ಎಂದು ಫಲಕಗಳಿಡಿದು ಮಂಡ್ಯದ ವಿವಿಧ ರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಸಿದರು.