Friday, September 26, 2025
Google search engine

Homeರಾಜ್ಯಪಕ್ಷ ವಿರೋಧಿ ಹೇಳಿಕೆ: ರಾಜು ಕಾಗೆ ಅವರನ್ನು ನಿಗಮ ಅಧ್ಯಕ್ಷ ಸ್ಥಾನದಿಂದ ವಜಾ

ಪಕ್ಷ ವಿರೋಧಿ ಹೇಳಿಕೆ: ರಾಜು ಕಾಗೆ ಅವರನ್ನು ನಿಗಮ ಅಧ್ಯಕ್ಷ ಸ್ಥಾನದಿಂದ ವಜಾ

ಬೆಂಗಳೂರು : ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮಜುಗರ ತರುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ರಾಜಣ್ಣ ಬಳಿಕ ಮತ್ತೊರ್ವ ಹಿರಿಯ ಶಾಸಕನಿಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದೆ.

ಹೌದು ಪಕ್ಷ ವಿರೋಧಿ ಹೇಳಿಕೆಗಳು ಮತ್ತು ಸರ್ಕಾರಕ್ಕೆ ಮುಜುಗರ ಉಂಟಾಗುವಂತಹ ಮಾತುಗಳನ್ನಾಡುವ ನಾಯಕರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಕಠಿಣ ಕ್ರಮ ಮುಂದುವರಿಸಿದೆ. ಕೆಎನ್ ರಾಜಣ್ಣರನ್ನು ಸಂಪುಟದಿಂದ ತೆರವುಗೊಳಿಸಿದ ಬಳಿಕ ಇದೀಗ ಶಾಸಕ ರಾಜು ಕಾಗೆ ಅವರನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದಿಂದ ಕೈ ಬಿಡಲಾಗಿದೆ.

ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂಥ ಹೇಳಿಕೆ ನೀಡಿದ ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ರಾಜು ಕಾಗೆ ಬದಲಾಗಿ ಅರುಣ್ ಪಾಟೀಲ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರು ಸಿಎಂ ಸಿದ್ದರಾಮಯ್ಯಗೆ ಅಂತಿಮ ಪಟ್ಟಿಯನ್ನು ರವಾನಿಸಿದ್ದಾರೆ.

ಅಷ್ಟಕ್ಕೂ ರಾಜು ಕಾಗೆ ಹೇಳಿದ್ದೇನು?

ಕೆಲ ಸಮಯ ಹಿಂದೆ ಸರ್ಕಾರಕ್ಕೆ ಮುಜುಗರ ಉಂಟುಮಾಡುವಂತಹ ಹೇಳಿಕೆಯನ್ನು ರಾಜು ಕಾಗೆ ನೀಡಿದ್ದರು. ನನಗೆ ಸರ್ಕಾರದಿಂದ 25 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಆಗಿದೆ. 13 ಕೋಟಿ ರೂಪಾಯಿಯಲ್ಲಿ 72 ಸಮುದಾಯ ಭವನ, 12 ಕೋಟಿ ರೂಪಾಯಿಯಲ್ಲಿ ರಸ್ತೆ ನಿರ್ಮಾಣಕ್ಕೆ ಚಾಲನೆ ‌ನೀಡಿದ್ದೆ. ಚಾಲನೆ ನೀಡಿ ಎರಡು ವರ್ಷ ಕಳೆದರೂ ಈವರೆಗೆ ಕಾಮಗಾರಿ ಆರಂಭವಾಗಿಲ್ಲ. ವರ್ಕ್ ಆರ್ಡರ್ ಕೊಡದಿರುವುದಕ್ಕೆ ನನಗೆ ನೋವಾಗಿದೆ ಎಂದು ಕಾಗೆ ಅಸಾಮಾಧಾನ ವ್ಯಕ್ತಪಡಿಸಿದ್ದರು.

RELATED ARTICLES
- Advertisment -
Google search engine

Most Popular