ಮೈಸೂರು: ನಮ್ಮ ಪಕ್ಷದಿಂದ ಹೋದವರು ಮಾತ್ರವಲ್ಲ. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರು ಸ್ವಾಗತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ? ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ. ಸರ್ಕಾರ ಬಂದು ನೂರು ದಿನ ಆಗಿದೆ. ಇದುವರೆಗೂ ವಿಪಕ್ಷ ನಾಯಕನನ್ನು ಮಾಡಲು ಸಾಧ್ಯವಾಗಿಲ್ಲ ಎಂದರು.
ಪ್ರಧಾನಿ ಬಿಜೆಪಿ ನಾಯಕರನ್ನು ಭೇಟಿ ಮಾಡದ ವಿಚಾರದ ಕುರಿತು ವ್ಯಂಗ್ಯವಾಡಿದ ಸಿದ್ದರಾಮಯ್ಯ, ಮೋದಿನೇ ಇವರನ್ನ ಭೇಟಿಗೆ ಬರಬೇಡಿ ಅಂದಿದ್ರಂತೆ ಎಂದು ಲೇವಡಿ ಮಾಡಿದರು.
ರಾಜ್ಯದಲ್ಲಿ ಬರ ವಿಚಾರವಾಗಿ ಮಾತನಾಡಿದ ಅವರು, ಮೋಡ ಬಿತ್ತನೆ ಯಾವ ಕಾಲದಲ್ಲೂ ಯಶಸ್ವಿಯಾಗಿಲ್ಲ. ಮೋಡ ಬಿತ್ತನೆಯೊಂದ ಯಾವುದೇ ಪ್ರಯೋಜನ ಇಲ್ಲ. ಬರಕ್ಕೆ ಬೇಕಾದಂತಹ ಅಗತ್ಯ ಕ್ರಮಕ್ಕೆ ಸೂಚಿಸಲಾಗಿದೆ. ಬರ ಪೀಡಿತ ಪ್ರದೇಶ ಘೋಷಣೆ ನಂತರ ಅಗತ್ಯ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದರು.