ಬೆಂಗಳೂರು: ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು 6 ತಿಂಗಳ ಕಾಲ ಅಮಾನತು ಮಾಡಿದ 18 ಬಿಜೆಪಿ ಶಾಸಕರ ಪರವಾಗಿ, ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಆದೇಶವನ್ನು ರದ್ದುಗೊಳಿಸಲು ಮನವಿ ಮಾಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ಈ ಸಂಬಂಧ ದೂರು ನೀಡಿದ್ದು, ಸ್ಪೀಕರ್ ಆದೇಶ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಹೇಳಿದ್ದಾರೆ.
ಹನಿಟ್ರ್ಯಾಪ್ ಮತ್ತು ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ವಿಚಾರವಾಗಿ ಚರ್ಚೆ ವೇಳೆ ಗಲಾಟೆ ಉಂಟಾಗಿದ್ದನ್ನು ಕಾರಣವಾಗಿ ಸ್ಪೀಕರ್ ಯುಟಿ ಖಾದರ್ ಈ ಆದೇಶ ನೀಡಿದ್ದರು. ವಿಜಯೇಂದ್ರ ಹೇಳುವಂತೆ, ರಾಜ್ಯಪಾಲರು ಸರ್ಕಾರಕ್ಕೆ ಬುದ್ದಿ ಹೇಳಬೇಕಿದೆ ಎಂದು ಬಿಜೆಪಿ ಮನವಿ ಮಾಡಿದೆ.